ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Federal Bank Recruitment 2025: ಫೆಡರಲ್‌ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Bank Jobs: ಕೇರಳದ ಆಲುವಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಫೆಡರಲ್‌ ಬ್ಯಾಂಕ್‌ ಇದೀಗ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸೋಸಿಯೇಟ್‌ ಆಫೀಸರ್ಸ್‌ (ಸೇಲ್ಸ್‌) ಹುದ್ದೆ ಇದಾಗಿದೆ. ಕರ್ನಾಟಕ, ತಮಿಳುನಾಡು, ಮತ್ತು ಮಹಾರಾಷ್ಟ್ರದಲ್ಲಿ ಈ ಹುದ್ದೆಗಳಿವೆ.

ಫೆಡರಲ್‌ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಹೀಗೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ.

Profile Ramesh B Jun 13, 2025 3:45 PM

ಬೆಂಗಳೂರು: ಖಾಸಗಿ ವಲಯದ ಮುಖ್ಯ ಬ್ಯಾಂಕ್‌ಗಳಲ್ಲಿ ಒಂದಾದ ಕೇರಳದ ಆಲುವಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಫೆಡರಲ್‌ ಬ್ಯಾಂಕ್‌ (Federal Bank) ಇದೀಗ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Federal Bank Recruitment 2025). ಅಸೋಸಿಯೇಟ್‌ ಆಫೀಸರ್ಸ್‌ (ಸೇಲ್ಸ್‌) (Associate Officers (Sales) ಹುದ್ದೆ ಇದಾಗಿದೆ. ಕರ್ನಾಟಕ, ತಮಿಳುನಾಡು, ಮತ್ತು ಮಹಾರಾಷ್ಟ್ರದಲ್ಲಿ ಈ ಹುದ್ದೆಗಳಿವೆ. ಫೆಡರಲ್‌ ಬ್ಯಾಂಕ್‌ ಅಧಿಸೂಚನೆಯಲ್ಲಿ ನಿರ್ದಿಷ್ಟವಾಗಿ ಖಾಲಿ ಇರುವ ಹುದ್ದೆಗಳಿ ಸಂಖ್ಯೆ ನಮೂದಿಸಿಲ್ಲ (Job Guide). ಪದವಿ ವಿದ್ಯಾರ್ಹತೆ ಹೊಂದಿದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನ ಜೂ. 22.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸೋಸಿಯೇಟ್‌ ಆಫೀಸರ್ಸ್‌ (ಸೇಲ್ಸ್‌) ಹುದ್ದೆ ಇದಾಗಿದ್ದು, ದೇಶದ ಯಾವುದೇ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಗಮನಿಸಿ, ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಮತ್ತು ಪದವಿಯಲ್ಲಿ ಶೇ. 50ಕ್ಕಿಂತ ಅಧಿಕ ಅಂಕ ಪಡೆದಿರಬೇಕು. ಜತೆಗೆ ಡ್ರೈವಿಂಗ್‌ ಲೈಸನ್ಸ್‌ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಜತೆಗೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಕರ್ನಾಟಕ, ಮಹಾರಾಷ್ಟ್ರ ಮತ್ತು ತಮಿಳುನಾಡಿನವರು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಾಗಿ ಎಲ್ಲ ಅಭ್ಯರ್ಥಿಗಳು 350 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಇದಕ್ಕಾಗಿ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌, ಯುಪಿಐ ಮತ್ತು ಇಂಟರ್‌ನೆಟ್‌ ಬ್ಯಾಂಕಿಂಗ್‌ ಬಳಸಬೇಕು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಪರೀಕ್ಷಾ ಕೇಂದ್ರವಿದ್ದು, ಪರೀಕ್ಷೆಯ ಸಂಭಾವ್ಯ ದಿನಾಂಕ ಜು. 6. ಸೇಲ್ಸ್‌ ಆಪ್ಟಿಟ್ಯೂಡ್‌, ಲಾಜಿಕಲ್‌ ರೀಸನಿಂಗ್‌, ಕಂಪ್ಯೂಟರ್‌ ಅವೆರ್‌ನೆಸ್‌, ಇಂಗ್ಲಿಷ್‌ ಪ್ರೊಫಿಯ್ಶೆನ್ಸಿ, ಸಾಮಾನ್ಯ ಜ್ಞಾನದ ಪ್ರಶ್ನೆಗಳಿವೆ. ಒಟ್ಟು 50 ಅಂಕಗಳ ಪ್ರಶ್ನೆಗಳಿಗೆ ಉತ್ತರಿಸಲು 45 ನಿಮಿಷಗಳ ಕಾಲಾವಕಾಶ ಇರುತ್ತದೆ.

ಈ ಸುದ್ದಿಯನ್ನೂ ಓದಿ: SSC Recruitment 2025: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್‌ನ್ಯೂಸ್‌; ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನಿಂದ 2,423 ಹುದ್ದೆಗಳ ಭರ್ತಿ

Federal Bank Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://federalbank.manipalbfsi.com/federal-bank/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿಗೆ ಅಧಿಕೃತವೆಬ್‌ಸೈಟ್‌ ವಿಳಾಸ: federalbank.co.inಗೆ ಭೇಟಿ ನೀಡಿ.