ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಸರ್ಕಾರ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 72 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72 ಸಾವಿರ ಹುದ್ದೆಗಳ ಶೀಘ್ರ ಭರ್ತಿಗೆ ಕರ್ನಾಟಕ ಸರ್ಕಾರ ಆದೇಶವನ್ನು ನೀಡಿದೆ. ಮುಂದಿನ ಆರು ತಿಂಗಳೊಳಗೆ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ. ಇದಕ್ಕಾಗಿ 2-4-6 ಸೂತ್ರವನ್ನು ಬಳಸುವಂತೆ ಆದೇಶಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ (various job) ರಾಜ್ಯಾದ್ಯಂತ ಖಾಲಿ ಇರುವ ಒಟ್ಟು 72,186 ಹುದ್ದೆಗಳನ್ನು ಆರು ತಿಂಗಳೊಳಗೆ ಭರ್ತಿ ಮಾಡಲು ಕರ್ನಾಟಕ ಸರ್ಕಾರ (karnataka govt) ಆದೇಶಿಸಿದೆ. ಇದರ ಉಸ್ತುವಾರಿಯನ್ನು ಉನ್ನತ ಅಧಿಕಾರಿಗಳಿಗೆ ವಹಿಸಲಾಗಿದ್ದು, ಅತ್ಯಂತ ವೇಗವಾಗಿ ಮತ್ತು ಪಾರದರ್ಶಕವಾಗಿ ನೇಮಕಾತಿ (job vacancy) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಇದರ ಸಂಪೂರ್ಣ ಉಸ್ತುವಾರಿ ಹೊಂದಿದ್ದು, ನೇಮಕಾತಿ ಪ್ರಕ್ರಿಯೆಗೆ 2-4-6 ಕಾಲಮಿತಿಯ ಸೂತ್ರದ ಗಡುವನ್ನು ವಿಧಿಸಲಾಗಿದೆ.

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಒಟ್ಟು 72,186 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಒಟ್ಟು ಖಾಲಿ ಇರುವ ಹುದ್ದೆಗಳಲ್ಲಿ 2023 - 24ನೇ ಸಾಲಿನ ಹುದ್ದೆಗಳು ಕೂಡ ಸೇರಿವೆ. ಇದರಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳ ಭರ್ತಿಗೆ ಹಾಗೂ ಕಲ್ಯಾಣ ಕರ್ನಾಟಕದ ಸ್ಥಳೀಯ ವಿಭಾಗದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಸುಮಾರು 26,000 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಯನ್ನು ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನೇಮಕಾತಿ ಪ್ರಕ್ರಿಯೆಗೆ 2-4-6 ತಿಂಗಳ ಕಾಲ ಮಿತಿಯನ್ನು ನಿಗದಿಪಡಿಸಲಾಗಿದ್ದು, ಇದರಲ್ಲಿ 2 ತಿಂಗಳೊಳಗೆ ನೇಮಕಾತಿ ಅಧಿಸೂಚನೆ ಹೊರಡಿಸುವುದು, 4 ತಿಂಗಳೊಳಗೆ ನೇಮಕಾತಿ ಪರೀಕ್ಷೆಗಳನ್ನು ನಡೆಸುವುದು ಮತ್ತು 6 ತಿಂಗಳೊಳಗೆ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಆದೇಶವನ್ನು ನೀಡಲಾಗಿದೆ.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಡೆಸಲು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಇದರ ಉಸ್ತುವಾರಿಯನ್ನು ನೀಡಲಾಗಿದೆ.

Chikkaballapur News: ದಲಿತರ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಅಧಿವೇಶನ ನಡೆಸಿ ಎಂದು ಆಗ್ರಹಿಸಿ ಜುಲೈ 3ಕ್ಕೆ ದಲಿತ ಜನಾಗ್ರಹ ಸಮಾವೇಶ

ಒಟ್ಟಿನಲ್ಲಿ ಸುದೀರ್ಘ ಕಾಲದಿಂದ ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಈಗ ಅವಕಾಶದ ಬಾಗಿಲು ತೆರೆದಂತಾಗಿದೆ. ಕೇವಲ 6 ತಿಂಗಳೊಳಗೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಹೆಚ್ಚಾಗಿದೆ. ರಾಜ್ಯ ಸರ್ಕಾರದ ಆದೇಶವು ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದ್ದು, ಈ ಕುರಿತ ಅಧಿಕೃತ ಅಧಿಸೂಚನೆಗಳು ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆ ಇದೆ.

ವಿದ್ಯಾ ಇರ್ವತ್ತೂರು

View all posts by this author