HAL Recruitment 2025: ಎಚ್‌ಎಎಲ್‌ನಲ್ಲಿ ಉದ್ಯೋಗಾವಕಾಶ; ಐಟಿಐ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
Job Alert: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಐಟಿಐ ಹಾಗೂ ಡಿಪ್ಲೊಮ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 25ರವರೆಗೆ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ. 22: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಡಿಸೆಂಬರ್ 25. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ hal-india.co.inಗೆ ಭೇಟಿ ನೀಡಬಹುದಾಗಿದ್ದು, ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆ ವಿವರ
ಒಟ್ಟು 156 ಆಪರೇಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಗ್ರೈಂಡಿಂಗ್ ಇನ್ಟ್ರುಮೆಂಟ್ ಮೆಕ್ಯಾನಿಕ್/ಇನ್ಟ್ರುಮೆಂಟೇಶನ್, ಮೆಷಿನಿಂಗ್, ಟರ್ನಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿರಬೇಕು.
ಅಂಗನವಾಡಿಗಳಿಗೆ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕ
ವಯೋಮಿತಿ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸಿನ ವಯೋಮಿತಿ ನವೆಂಬರ್ 25, 2025ರ ಪ್ರಕಾರ ಸಾಮಾನ್ಯ ಮತ್ತು ಇಡಬ್ಲ್ಯುಎಸ್ ಅಭ್ಯರ್ಥಿಗಳು 28 ವರ್ಷ, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳು 33 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳು 31 ವರ್ಷ ಮೀರಬಾರದು.
ವೇತನ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 22,000 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆಯ್ಕೆ ಪ್ರಕ್ರಿಯೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಈ ಲಿಂಕ್: https://hal-india.co.in/homeಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆ
ಅಧಿಕೃತ ವೆಬ್‌ಸೈಟ್ https://hal-india.co.in/homeಗೆ ಭೇಟಿ ನೀಡಿ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿಭಾಗವನ್ನು ಆಯ್ಕೆ ಮಾಡಿ. ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಗ್ರೈಂಡಿಂಗ್ ಇನ್ಟ್ರುಮೆಂಟ್ ಮೆಕ್ಯಾನಿಕ್/ಇನ್ಟ್ರುಮೆಂಟೇಶನ್, ಮೆಷಿನಿಂಗ್ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ. ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ. ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ Submit ಬಟನ್ ಒತ್ತುವ ಮೂಲಕ ಅರ್ಜಿ ಸಲ್ಲಿಸಿ.