ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

HPCL Recruitment 2025: ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿದೆ 63 ಹುದ್ದೆ; ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ

Job Guide: ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 63 ಜೂನಿಯರ್‌ ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ದೇಶದ ಯಾವ ಭಾಗದಲ್ಲಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅಪ್ಲೈ ಮಾಡಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಮಾ. 26ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 30.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ (Hindustan Petroleum Corporation Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Job Guide). ಒಟ್ಟು 63 ಜೂನಿಯರ್‌ ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ದೇಶದ ಯಾವ ಭಾಗದಲ್ಲಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅಪ್ಲೈ ಮಾಡಬಹುದು (HPCL Recruitment 2025). ವಿವಿಧ ವಿಷಯಗಳಲ್ಲಿ ಡಿಪ್ಲೊಮಾ ಓದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಮಾ. 26ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 30.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜೂನಿಯರ್ ಎಕ್ಸಿಕ್ಯೂಟಿವ್-ಮೆಕ್ಯಾನಿಕಲ್ - 11 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್‌ ಮೆಕ್ಯಾನಿಕಲ್ ಎಂಜಿನಿಯರಿಂಗ್‌

ಜೂನಿಯರ್ ಎಕ್ಸಿಕ್ಯೂಟಿವ್-ಎಲೆಕ್ಟ್ರಿಕಲ್ - 17 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್‌ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌

ಜೂನಿಯರ್ ಎಕ್ಸಿಕ್ಯೂಟಿವ್-ಇನ್ಸ್ಟ್ರುಮೆಂಟೇಶನ್ - 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್‌ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌

ಜೂನಿಯರ್ ಎಕ್ಸಿಕ್ಯೂಟಿವ್-ಕೆಮಿಕಲ್ - 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್‌ ಕೆಮಿಕಲ್‌ ಎಂಜಿನಿಯರಿಂಗ್‌

ಜೂನಿಯರ್ ಎಕ್ಸಿಕ್ಯೂಟಿವ್-ಫೈರ್ & ಸೇಫ್ಟಿ - 28 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್‌ ಫೈರ್ & ಸೇಫ್ಟಿ, ಪದವಿ.

ವಯೋಮಿತಿ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ನ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ-ಎನ್‌ಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿಎನ್‌ಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು 1,180 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಈ ಸುದ್ದಿಯನ್ನೂ ಓದಿ: Job Guide: ರಾಷ್ಟ್ರೀಯ ಕೆಮಿಕಲ್‌ & ಫರ್ಟಿಲೈಸರ್ಸ್‌ ಲಿಮಿಟೆಡ್‌ನಲ್ಲಿದೆ 74 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 30,000 ರೂ.-1,2,0000 ರೂ. ಮಾಸಿಕ ವೇತನ ದೊರೆಯಲಿದೆ.

HPCL Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://jobs.hpcl.co.in/Recruit_New/recruitlogin.jsp)

* ಹೆಸರು ನೋಂದಾಯಿಸಿ

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿ ವೆಬ್‌ಸೈಟ್‌ ವಿಳಾಸ: hindustanpetroleum.comಗೆ ಭೇಟಿ ನೀಡಿ.

Ramesh Ballamoole

View all posts by this author