ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IBPS Recruitment 2025: 6,215 ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Guide: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶಾದ್ಯಂತ ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಒಟ್ಟು 6,215 ಪ್ರೊಬೆಷನರಿ ಆಫೀಸರ್‌, ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಜು. 21.

6,215 ಹುದ್ದೆಗಳ ಭರ್ತಿಗೆ ಮುಂದಾದ IBPS

ಸಾಂದರ್ಭಿಕ ಚಿತ್ರ. -

Ramesh Ballamoole
Ramesh Ballamoole Jul 2, 2025 4:48 PM

ಬೆಂಗಳೂರು: ನೀವು ಪದವಿ ಪೂರೈಸಿ ಬ್ಯಾಂಕ್‌ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಉತ್ತಮ ಅವಕಾಶ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ದೇಶಾದ್ಯಂತ ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಒಟ್ಟು 6,215 ಪ್ರೊಬೆಷನರಿ ಆಫೀಸರ್‌, ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS Recruitment 2025). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಜು. 21.

ಬ್ಯಾಂಕ್‌ ಆಫ್‌ ಬರೋಡಾ, ಕೆನರಾ ಬ್ಯಾಂಕ್‌, ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌, ಯುಸಿಒ ಬ್ಯಾಂಕ್‌, ಬ್ಯಾಂಕ್‌ ಆಫ್‌ ಇಂಡಿಯಾ, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಮಹಾರಾಷ್ಟ್ರ, ಇಂಡಿಯನ್‌ ಬ್ಯಾಂಕ್‌, ಪಂಜಾಬ್‌ & ಸಿಂದ್‌ ಬ್ಯಾಂಕ್‌ಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ

ಪ್ರೊಬೆಷನರಿ ಆಫೀಸರ್‌- ಪದವಿ

ಐಟಿ ಆಫೀಸರ್‌-ಪದವಿ, ಸ್ನಾತಕೋತ್ತರ ಪದವಿ

ಅಗ್ರಿಕಲ್ಚರಲ್‌ ಫೀಲ್ಡ್‌ ಆಫೀಸರ್‌-ಪದವಿ, ಬಿ.ಇ ಅಥವಾ ಬಿ.ಟೆಕ್‌

ರಾಜ್ಯಭಾಷಾ ಅಧಿಕಾರಿ-ಸ್ನಾತಕೋತ್ತರ ಪದವಿ

ಲಾ ಆಫೀಸರ್‌-ಎಲ್‌ಎಲ್‌ಬಿ

ಎಚ್‌ಆರ್‌/ಪರ್ಸನಲ್‌ ಆಫೀಸರ್‌-ಪದವಿ, ಸ್ನಾತಕೋತ್ತರ ಪದವಿ

ಮಾರ್ಕೆಟಿಂಗ್‌ ಆಫೀಸರ್‌-ಪದವಿ, ಎಂಬಿಎ, ಎಂಎಂಎಸ್‌, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಪಿಎಂ, ಪಿಜಿಡಿಎಂ

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ, ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿ/ಇಡಬ್ಲ್ಯುಸಿ ಅಭ್ಯರ್ಥಿಗಳು 850 ರೂ. ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಈ ಸುದ್ದಿಯನ್ನೂ ಓದಿ: RRB Recruitment 2025: 10, 12ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್; ರೈಲ್ವೆ ನೇಮಕಾತಿ ಮಂಡಳಿಯಿಂದ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಪ್ರಿಲಿಮಿನರಿ ಟೆಸ್ಟ್‌, ಮೈನ್‌ ಟೆಸ್ಟ್‌, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.

ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಪ್ರೊಬೆಷನರಿ ಆಫೀಸರ್‌ ಹುದ್ದೆಗಳ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

ಹೆಚ್ಚಿನ ವಿವರಗಳಿಗೆ ವೆಸೈಟ್‌ ವಿಳಾಸ: https://www.ibps.in/ಗೆ ಭೇಟಿ ನೀಡಿ.