ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IDBI Bank Recruitment: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: 1,300 ಜೂನಿಯರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಐಡಿಬಿಐ ಬ್ಯಾಂಕ್ 2026ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, 1,300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಅರ್ಜಿ ಪ್ರಕ್ರಿಯೆ ಮಾರ್ಚ್ 8ರಿಂದ ಆರಂಭವಾಗಿ ಮಾರ್ಚ್ 19ರವರೆಗೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಐಡಿಬಿಐ ಬ್ಯಾಂಕ್ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಮಾ. 10: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಐಡಿಬಿಐ ಬ್ಯಾಂಕ್ (IDBI Bank) ಉತ್ತಮ ಅವಕಾಶವನ್ನು ನೀಡಿದೆ. IDBI Bank Recruitment 2026 ಅಡಿಯಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM – Grade ‘O’) ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ (Grade ‘A’) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ಪ್ರದೇಶಗಳಲ್ಲಿ ಒಟ್ಟು 1,300 ಹುದ್ದೆಗಳನ್ನು ಭರ್ತಿ ಮಾಡಲು ಬ್ಯಾಂಕ್ ಮುಂದಾಗಿದೆ.

ಈ ನೇಮಕಾತಿಯಲ್ಲಿ 1,100 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM – Grade ‘O’) ಹಾಗೂ 200 ಅಸಿಸ್ಟೆಂಟ್ ಮ್ಯಾನೇಜರ್ (Grade ‘A’) ಹುದ್ದೆಗಳು ಸೇರಿವೆ. ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಪ್ರಾದೇಶಿಕ ಆಧಾರದ ಮೇಲೆ ನೇಮಕಾತಿಯಾಗಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಕರಿಯರ್ ಅವಕಾಶ ದೊರೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ (Graduation) ಪಡೆದಿರಬೇಕು. ವಯೋಮಿತಿ ಹಾಗೂ ಇತರ ಅರ್ಹತಾ ಮಾನದಂಡಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಬ್ಯಾಂಕಿನ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸುವುದು ಅಗತ್ಯ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆ ಸಾಮಾನ್ಯವಾಗಿ ಆನ್‌ಲೈನ್ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಹಂತಗಳ ಮೂಲಕ ನಡೆಯಲಿದೆ. ಪರೀಕ್ಷೆಯಲ್ಲಿ ಬ್ಯಾಂಕಿಂಗ್ ಜ್ಞಾನ, ತಾರ್ಕಿಕ ಸಾಮರ್ಥ್ಯ, ಗಣಿತ ಹಾಗೂ ಇಂಗ್ಲಿಷ್ ಭಾಷೆ ಸಂಬಂಧಿತ ಪ್ರಶ್ನೆಗಳು ಇದೆ.

ಸುಪ್ರೀಂ ಕೋರ್ಟ್‌ನಲ್ಲಿದೆ ಉದ್ಯೋಗಾವಕಾಶ; ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು IDBI ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ನಂತರ “Career” ಅಥವಾ “Recruitment” ವಿಭಾಗದಲ್ಲಿ ಇರುವJAM/Assistant Manager Recruitment 2026 ಲಿಂಕ್ ಕ್ಲಿಕ್ ಮಾಡಬೇಕು.

ನಂತರ ಹೊಸ ನೋಂದಣಿ ಮಾಡಿ ಹೆಸರು, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನಮೂದಿಸಿ ಲಾಗಿನ್ ಆಗಬೇಕು. ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳು, ವಿದ್ಯಾರ್ಹತೆ ಹಾಗೂ ಇತರ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳು, ಪಾಸ್‌ಪೋರ್ಟ್ ಗಾತ್ರದ ಫೋಟೊ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಬೇಕು. ಬಳಿಕ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ದಿನಾಂಕಗಳು

ಆನ್‌ಲೈನ್ ಅರ್ಜಿ ಆರಂಭ: ಮಾರ್ಚ್ 8, 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 19, 2026

ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: ಮಾರ್ಚ್ 19, 2026

ಆನ್‌ಲೈನ್ ಪರೀಕ್ಷೆಯ ದಿನಾಂಕ: ನಂತರ ಪ್ರಕಟಿಸಲಾಗುತ್ತದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರ ಉದ್ಯೋಗ ಮತ್ತು ಉತ್ತಮ ವೇತನದೊಂದಿಗೆ ಕರಿಯರ್ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.