ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Post Recruitment: ಅಂಚೆ ಇಲಾಖೆಯ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

ಭಾರತೀಯ ಅಂಚೆ ಕಚೇರಿಯು 30,000 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10 ಮತ್ತು 12ನೇ ತರಗತಿ ಅಥವಾ ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಜನವರಿ 15ರಂದು ಕಡೆಯ ದಿನಾಂಕ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ. 30: ಭಾರತೀಯ ಅಂಚೆ ಇಲಾಖೆ (India Postal Department)ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದೆ. ಒಟ್ಟು 30,000 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ (Job Alert) ಭರ್ತಿಗೆ ನೇಮಕಾತಿ ನೋಟಿಫಿಕೇಶನ್‌ ಹೊರಡಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದೊಂದು ಸುವರ್ಣವಕಾಶ ಇದಾಗಿದೆ. ಗ್ರಾಮೀಣ ಡಾಕ್ ಸೇವಕ್ ಅಡಿಯಲ್ಲಿ ಬರುವ ಬಿಪಿಎಂ (BPM)-ಬ್ರಾಂಚ್ ಪೋಸ್ಟ್ ಮಾಸ್ಟರ್, ಎಬಿಪಿಎಂ (ABPM)-ಅಸಿಸ್ಟೆಂಟ್ ಬ್ರ್ಯಾಂಚ್‌ ಪೋಸ್ಟ್ ಮಾಸ್ಟರ್ ಹಾಗೂ ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 10 ಮತ್ತು 12ನೇ ತರಗತಿ ಅಥವಾ ಪಿಯುಸಿ ಆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ 2026ರ ಜನವರಿ 15.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲದರ ಕುರಿತಾದ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ ತರಗತಿ ಅಥವಾ ತತ್ಸಮಾನ ಪಿಯು ಪೂರ್ಣಗೊಳಿಸಿರಬೇಕು. ಜತೆಗೆ ಸ್ಥಳೀಯ ಭಾಷೆಯ ಜ್ಞಾನವಿರಬೇಕು. ಕಂಪ್ಯೂಟರ್ ತಿಳುವಳಿಕೆ ಇರಬೇಕು. ದ್ವಿಚಕ್ರ ವಾಹನದ ಡ್ರೈವಿಂಗ್ ಲೈಸೆನ್ಸ್​ ಹೊಂದಿರಬೇಕು.

ಇಂಡಿಯನ್ ಆಯಿಲ್​ನಲ್ಲಿ 501 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ಇನ್ನು ಈ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದಲ್ಲಿ ಆಯ್ಕೆ ಮಾಡಲಿದ್ದು, ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುತ್ತದೆ.

ಅರ್ಜಿ ಶುಲ್ಕ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಎಸ್​​ಸಿ/ಎಸ್​ಟಿ/PWD/ಮಹಿಳಾ & ಟ್ರಾನ್ಸ್​ವುಮನ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಈ ಕೆಟಗರಿಯ ಅರ್ಜಿ ಸಲ್ಲಿಸುವ ಇತರ ಎಲ್ಲ ಅಭ್ಯರ್ಥಿಗಳಿಗೆ 100 ರೂ.ಅರ್ಜಿ ಶುಲ್ಕ ನಿಗದಿ ಪಡಿಸಿದ್ದು, ಆನ್​ಲೈನ್​ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ indiapostgdsonline.gov.inಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.