ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಇಂಡಿಯನ್ ಬ್ಯಾಂಕ್​ನಲ್ಲಿ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ?

ನೀವು ಯಾವುದೇ ವಿಷಯದಲ್ಲಿ ಡಿಗ್ರಿ ಪಾಸ್ ಆಗಿ, ಬ್ಯಾಂಕಿಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅಪ್ರೆಂಟಿಸ್ ಹುದ್ದೆಗಳಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆ ಕುರಿತಾದ ಹೆಚ್ಚಿನ ಮಾಹಿತಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 2025, ಆಗಿದೆ.

Indian Bank Recruitment 2025: ಬಿಒಐ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ

ಬ್ಯಾಂಕ್ ಆಫ್ ಇಂಡಿಯಾ(ಸಂಗ್ರಹ ಚಿತ್ರ) -

Profile
Sushmitha Jain Dec 27, 2025 4:22 PM

ಬೆಂಗಳೂರು, ಡಿ.27: ಬ್ಯಾಂಕ್ ಆಫ್ ಇಂಡಿಯಾ ( bankofindia.bank.in)ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1,500 ಅಪ್ರೆಂಟಿಸ್(Apprentice)​ ಹುದ್ದೆಗಳು(Jobs) ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 10, 2025ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಬ್ಯಾಂಕ್ ಆಫ್ ಇಂಡಿಯಾಯೆಈ ಎಲ್ಲದರ ಕುರಿತಾದ ಇಲ್ಲಿದೆ ಮಾಹಿತಿ.

ಅರ್ಹತೆಗಳೇನು?

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯಗಳಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ

ಅರ್ಜಿ ಶುಲ್ಕವೆಷ್ಟು?

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರು 800 ರೂ. ಹಾಗೂ ಎಸ್‌ಸಿ/ಎಸ್‌ಟಿ ಮತ್ತು ವಿಶೇಷಚೇತನ ಅಭ್ಯರ್ಥಿಗಳು 400 ರೂ. ಶುಲ್ಕ ಪಾವತಿಸಲು ಸೂಚಿಸಲಾಗಿದೆ.

HAL Recruitment 2025: ಎಚ್‌ಎಎಲ್‌ನಲ್ಲಿ ಉದ್ಯೋಗಾವಕಾಶ; ಐಟಿಐ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ

ಆಯ್ಕೆ ಹೇಗೆ?

ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು 100 ಅಂಕಗಳದಾಗಿದ್ದು, ಜೆನೆರಲ್ ಇಂಗ್ಲಿಷ್, ಜೆನೆರಲ್ / ಫೈನಾನ್ಸಿಯಲ್ ಅವಾರ್ನೆಸ್, ಕ್ವಾಂಟಿಟೇಟಿವ್ ಅಂಡ್ ರೀಸನಿಂಗ್ ಆಪ್ಟಿಟ್ಯೂಡ್, ಕಂಪ್ಯೂಟರ್ ಶಿಕ್ಷಣದ ಕುರಿತು ಪ್ರಶ್ನೆ ಕೇಳಲಾಗುತ್ತದೆ. ಮೆರಿಟ್‌ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಆದವರಿಗೆ ಮೆಡಿಕಲ್ ಟೆಸ್ಟ್‌ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು bankofindia.bank.inಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

BOI ಅಪ್ರೆಂಟಿಸ್ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್​ ಮಾಡಿ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ / ಮಾಹಿತಿಗಳು

ಆಧಾರ್ ಕಾರ್ಡ್‌

ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

ಜನ್ಮ ದಿನಾಂಕ ದಾಖಲೆ / ಮಾಹಿತಿ

ಪದವಿ ಪಾಸ್ ಸರ್ಟಿಫಿಕೇಟ್

ಇಮೇಲ್ ವಿಳಾಸ

ಮೊಬೈಲ್ ನಂಬರ್

ಕಂಪ್ಯೂಟರ್ ಶಿಕ್ಷಣ ಪಡೆದಿದ್ದಲ್ಲಿ ಸರ್ಟಿಫಿಕೇಟ್

ಅರ್ಜಿ ಸಲ್ಲಿಸುವವರು ಅಭ್ಯರ್ಥಿಗಳು ಸ್ಥಳೀಯ ಭಾಷೆಗಳಲ್ಲಿ ಹಿಡಿತ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಬ್ಯಾಂಕ್ ವೆಬ್‌ಸೈಟ್‌ www.indianbank.inಗೆ ಭೇಟಿ ನೀಡಬಹುದಾಗಿದೆ.