Indian Navy Recruitment 2025: ಭಾರತೀಯ ನೌಕಾಪಡೆಯಲ್ಲಿದೆ 270 ಹುದ್ದೆ; ಹೀಗೆ ಅಪ್ಲೈ ಮಾಡಿ
ಖಾಲಿ ಇರುವ 270 ಎಸ್‌ಎಸ್‌ಸಿ ಆಫೀಸರ್ ಹುದ್ದೆಗಳ ಭರ್ತಿಗೆ ಭಾರತೀಯ ನೌಕಾಪಡೆ ಅರ್ಜಿ ಆಹ್ವಾನಿಸಿದೆ. ಪೈಲಟ್, ಏರ್ ಟ್ರಾಫಿಕ್ ಕಂಟ್ರೋಲರ್ ಮುಂತಾದ ಹುದ್ದೆಗಳಿದ್ದು, ಬಿ.ಎಸ್‌ಸಿ, ಬಿ.ಕಾಂ, ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 25

ಸಾಂದರ್ಭಿಕ ಚಿತ್ರ.

ಬೆಂಗಳೂರು: ಭಾರತೀಯ ನೌಕಾಪಡೆ (Indian Navy)ಯಲ್ಲಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್ (Indian Navy Recruitment 2025). ಖಾಲಿ ಇರುವ 270 ಎಸ್‌ಎಸ್‌ಸಿ ಆಫೀಸರ್ (SSC Officer) ಹುದ್ದೆಗಳ ಭರ್ತಿಗೆ ಭಾರತೀಯ ನೌಕಾಪಡೆ ಅರ್ಜಿ ಆಹ್ವಾನಿಸಿದೆ. ಪೈಲಟ್, ಏರ್ ಟ್ರಾಫಿಕ್ ಕಂಟ್ರೋಲರ್ ಮುಂತಾದ ಹುದ್ದೆಗಳಿದ್ದು, ಬಿ.ಎಸ್‌ಸಿ, ಬಿ.ಕಾಂ, ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 25 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಎಕ್ಸಿಕ್ಯುಟಿವ್ ಬ್ರ್ಯಾಂಚ್ - 60 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಪೈಲಟ್ - 26 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ನೇವಲ್ ಏರ್ ಆಪರೇಶನ್ಸ್ ಆಫೀಸರ್ - 22 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಏರ್ ಟ್ರಾಫಿಕ್ ಕಂಟ್ರೋಲರ್ (ATC) - 18 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಲಾಜಿಸ್ಟಿಕ್ಸ್ - 28 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್, ಎಂಬಿಎ, ಎಂಸಿಎ, ಎಂ.ಎಸ್‌ಸಿ
ಶಿಕ್ಷಣ - 15 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂ.ಎಸ್‌ಸಿ
ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ - GS) - 38 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಎಲೆಕ್ಟ್ರಿಕಲ್ ಬ್ರ್ಯಾಂಚ್ (ಜನರಲ್ ಸರ್ವಿಸ್ - (GS) 45 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ನೇವಲ್ ಕನ್‌ಸ್ಟ್ರಕ್ಟರ್ - 18 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ನಿರ್ಧರಿಸಲಾಗಿದ್ದು, ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಲಭ್ಯ ಎಂದು ಅಧಿಸೂಚನೆ ತಿಳಿಸಿದೆ
Indian Navy Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Job Guide: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿದೆ 246 ಹುದ್ದೆ; ಹೀಗೆ ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://www.joinindiannavy.gov.in/en/account/account/state)
* ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ, ಅಲ್ಲಿ ಕಂಡು ಬರುವ ಕ್ಯಾಪ್ಚಾವನ್ನು ನಮೂದಿಸಿ ಲಾಗಿನ್ ಆಗಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ ವಿಳಾಸ: joinindiannavy.gov.inಗೆ ಭೇಟಿ ನೀಡಿ.