ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (Indian Oil Corporation Limited) ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ (for Trade and Technician Apprentice) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 501 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 12 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iocl.com ಅಥವಾ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಒಂದು ವರ್ಷದ ಅವಧಿಗೆ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಐಟಿಐ, ಡಿಪ್ಲೊಮಾ ಹಾಗೂ ಬಿಎ, ಬಿಎಸ್ಸಿ, ಬಿಕಾಂ ಪದವಿಯನ್ನು ಹೊಂದಿರಬೇಕು.
ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ 05 ವರ್ಷಗಳು ಹಾಗೂ ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಎಚ್‌ಎಎಲ್‌ನಲ್ಲಿ ಉದ್ಯೋಗಾವಕಾಶ; ಐಟಿಐ ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ ಹೇಗೆ ?
ಈ ಹುದ್ದೆಗಳಿಗೆ ಅರ್ಜಿದಾರರನ್ನು ಅವರ ವಿದ್ಯಾರ್ಹತೆಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫಂಡ್ ಸಹ ಸಿಗುತ್ತದೆ. ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಕೃತ IOCL ವೆಬ್‌ಸೈಟ್‌ನಲ್ಲಿ ಅಪ್ರೆಂಟಿಸ್ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಿ. ಇದರ ನಂತರ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.
ಅರ್ಜಿ ಪ್ರಕ್ರಿಯೆ ಹೇಗೆ?
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡಬೇಕು.
ಬಳಿಕ ಮುಖಪುಟದಲ್ಲಿ ಕಾಣುವ ನೇಮಕಾತಿಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆಗ ಹೊಸ ಪುಟ ತೆರೆದುಕೊಳ್ಳುತ್ತದೆ, ಅಲ್ಲಿ ನೀವು ನೋಂದಾಯಿಸಿಕೊಳ್ಳಬೇಕು.
ಲಾಗಿನ್ ಆದ ನಂತರ, ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ.
ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಕೊನೆಯದಾಗಿ ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅದರ ಮುದ್ರಣವನ್ನು ತೆಗೆದುಕೊಂಡು ಅದನ್ನು ನಿಮ್ಮೊಂದಿಗೆ ಸುರಕ್ಷಿತವಾಗಿ ಇರಿಸಿ