Job Guide: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿದೆ 246 ಹುದ್ದೆ; ಹೀಗೆ ಅಪ್ಲೈ ಮಾಡಿ
ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುತ್ತಿದ್ದರೆ ಇಲ್ಲಿದೆ ಭರಪೂರ ಅವಕಾಶ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್ ಸೇರಿ ಒಟ್ಟು 246 ಹುದ್ದೆಗಳಿವೆ. ಬೆಂಗಳೂರು ಸೇರಿ ದೇಶಾದ್ಯಂತ ಈ ಹುದ್ದೆಗಳಿವೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 23.


ಬೆಂಗಳೂರು: 10, 12ನೇ ತರಗತಿ ವಿದ್ಯಾರ್ಹತೆ ಹೊಂದಿ ನೀವು ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುತ್ತಿದ್ದರೆ ಇಲ್ಲಿದೆ ಭರಪೂರ ಅವಕಾಶ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (Indian Oil Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IOCL Recruitment 2025). ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್ ಸೇರಿ ಒಟ್ಟು 246 ಹುದ್ದೆಗಳಿವೆ. ಬೆಂಗಳೂರು ಸೇರಿ ದೇಶಾದ್ಯಂತ ಈ ಹುದ್ದೆಗಳಿವೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆ. 23 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜೂನಿಯರ್ ಆಪರೇಟರ್ - 215 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಜೂನಿಯರ್ ಅಟೆಂಡೆಂಟ್ - 23 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ - 8 ಹುದ್ದೆ, ವಿದ್ಯಾರ್ಹತೆ: ಪದವಿ. ಕರ್ನಾಟಕದಲ್ಲಿ ಒಟ್ಟು 12 ಹುದ್ದೆಗಳಿವೆ.
ವಯೋಮಿತಿ
ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 26 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 300 ರೂ. ಪಾವತಿಸಬೇಕು. ಎಸ್‌ಸಿ.ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು ಅರ್ಜಿ ಶುಲ್ಕ ಸಲ್ಲಿಸಬೇಕಿಲ್ಲ. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ, ಸ್ಕಿಲ್/ಫಿಸಿಕಲ್ ಟೆಸ್ಟ್/ಕಂಪ್ಯೂಟರ್ ಟೆಸ್ಟ್, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್ ಹುದ್ದೆಗೆ 23,000 ರೂ.- 78,000 ರೂ. ಮತ್ತು ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ ಹುದ್ದೆಗೆ 25,000 ರೂ. - 1,0,5000 ರೂ. ಮಾಸಿಕ ವೇತನ ದೊರೆಯಲಿದೆ.
IOCL Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
*ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsonline.ibps.in/iocljan25/)
* ಅರ್ಜಿ ಸಲ್ಲಿಸಬೇಕಾದ ಸ್ಥಳವನ್ನು ಆಯ್ಕೆ ಮಾಡಿ.
* ಹೆಸರು ನೋಂದಾಯಿಸಿ.
* ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: https://www.iocl.com/ಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Job Guide: ಬಾರ್ಡರ್ ರೋಡ್ಸ್ ಆರ್ಗನೈಸೇಷನ್‌ನಲ್ಲಿದೆ 411 ಹುದ್ದೆ; 10ನೇ ತರಗತಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಿ