ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (Bureau of Indian Standards) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BIS Recruitment 2024). ಅಸಿಸ್ಟಂಟ್ ಡೈರಕ್ಟರ್, ಪರ್ಸನಲ್ ಅಸಿಸ್ಟಂಟ್, ಅಸಿಸ್ಟಂಟ್, ಸ್ಟೆನೋಗ್ರಾಫರ್ ಸೇರಿ ಒಟ್ಟು 345 ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 30 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟಂಟ್ ಡೈರಕ್ಟರ್ – 3 ಹುದ್ದೆ, ವಿದ್ಯಾರ್ಹತೆ: ಸಿಎ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ
ಪರ್ಸನಲ್ ಅಸಿಸ್ಟೆಂಟ್ – 27 ಹುದ್ದೆ, ವಿದ್ಯಾರ್ಹತೆ: ಪದವಿ
ಅಸಿಸ್ಟಂಟ್ ಸೆಕ್ಷನ್ ಆಫೀಸರ್ (ASO) – 43 ಹುದ್ದೆ, ವಿದ್ಯಾರ್ಹತೆ: ಪದವಿ
ಅಸಿಸ್ಟಂಟ್ (CAD) 1 ಹುದ್ದೆ, ವಿದ್ಯಾರ್ಹತೆ: ಪದವಿ
ಸ್ಟೆನೋಗ್ರಾಫರ್ – 19 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ – 128 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ – 78 ಹುದ್ದೆ, ವಿದ್ಯಾರ್ಹತೆ: ಪದವಿ
ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬ್) – 27 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಪದವಿ
ಸೀನಿಯರ್ ಟೆಕ್ನಿಷಿಯನ್ – 18 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಟೆಕ್ನಿಷಿಯನ್ – 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10-15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಹಿಳೆಯರು / ಬಿಐಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಅಸಿಸ್ಟಂಟ್ ಡೈರಕ್ಟರ್ ಹುದ್ದೆಗೆ 800 ರೂ. ಮತ್ತು ಉಳಿದ ಎಲ್ಲಾ ಹುದ್ದೆಗಳಿಗೆ 500 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ
ಆನ್‌ಲೈನ್ ಪರೀಕ್ಷೆ, ಪ್ರಾಕ್ಟಿಕಲ್ ಸ್ಕಿಲ್ ಟೆಸ್ಟ್, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
BIS Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://ibpsonline.ibps.in/bisjan24/)
- ಹೆಸರು ನೋಂದಾಯಿಸಿ.
- ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: bis.gov.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Job Guide: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿದೆ 39 ಹುದ್ದೆ; ಇಂದೇ ಅಪ್ಲೈ ಮಾಡಿ