Police Constable Answer Key 2026: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರ ಪ್ರಕಟ; ಇಲ್ಲಿದೆ ಲಿಂಕ್
KEA CAR DAR Recruitment 2026: ಬೆಂಗಳೂರು: ರಾಜ್ಯದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿ ಪರೀಕ್ಷೆ ಸೆ.6ರಂದು ನಡೆದಿತ್ತು. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ಕೆಇಎ ವೆಬ್‌ಸೈಟ್ ಮೂಲಕ ಸೆ.9ರ ಬೆಳಿಗ್ಗೆ 10:30 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.
-
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.6ರಂದು ಲಿಖಿತ ಪರೀಕ್ಷೆ ನಡೆದಿತ್ತು. ಅದಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನ ಪತ್ರಿಕೆಯ ಕೀ ಉತ್ತರಗಳನ್ನು (Police Constable Answer Key 2026) ಇಂದು (ಸೆ.7) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ಕೆಇಎ ವೆಬ್‌ಸೈಟ್ ಮೂಲಕ ಸೆ.9ರ ಬೆಳಿಗ್ಗೆ 10:30 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ.25/-ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಅಪೂರ್ಣ/ಆಧಾರ ರಹಿತವಾಗಿರುವ ಹಾಗೂ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ, ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದ್ದಾರೆ.
ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆದಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು (ಸೆ.7) ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
#KEA Recruitment:
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 7, 2026
ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (#CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆದಿದ್ದು ಅದಕ್ಕೆ ಸಂಬಂಧಿಸಿದಂತೆ ಸೆ.7ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್ ನಲ್ಲಿನ ಲಿಂಕ್ ಮೂಲಕ… pic.twitter.com/E1sR6koeXU
ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್‌ನಲ್ಲಿನ ಲಿಂಕ್ ಮೂಲಕ ಸಲ್ಲಿಸಬಹುದು. ಇದಕ್ಕೆ ಸೆ.9ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ. ಪೂರ್ಣ ಮಾಹಿತಿಯೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ ₹25 ಪಾವತಿಸಬೇಕು. ವಿಷಯ ತಜ್ಞರ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲಿಸಿ ಪ್ರಕಟಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ತಿಳಿಸಿದ್ದಾರೆ.
RPC ವೃಂದದ ಸಿಎಆರ್, ಡಿಎಆರ್ ಕೀ ಉತ್ತರಕ್ಕೆ ಇಲ್ಲಿ ಕ್ಲಿಕ್ ಮಾಡಿ