ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

High Court Recruitment: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 70 ಹುದ್ದೆಗಳಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಕುರಿತಾದ ಹೆಚ್ಚಿನ ಮಾಹಿತಿ, ವಿವರ ಇಲ್ಲಿದೆ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗಾಗಿ (Job Alert) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 70 ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 11 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾಗಿವೆ. ಸರ್ಕಾರಿ ಉದ್ಯೋಗವನ್ನು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಇತರ ಮಾನ್ಯ ಮಂಡಳಿಗಳಿಂದ ಆಂಗ್ಲ ಶೀಘ್ರಲಿಪಿ (Higher Grade) ಅಥವಾ ಶೀಘ್ರಲಿಪಿ ಮತ್ತು ಬೆರಳಚ್ಚು (Typing) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಹೊಂದಿರಬೇಕು. ಹಾಗೇ ಕಂಪ್ಯೂಟರ್ ಜ್ಞಾನ ಇರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಇರಬೇಕು.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 43 ವರ್ಷ
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ: 45 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ನೇಮಕಾತಿ; SSLC ಪಾಸಾದವರಿಗೆ ಅವಕಾಶ

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ರೂ. ಹಾಗೂ ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ:

ಅಭ್ಯರ್ಥಿಗಳ ಆಯ್ಕೆ ಶೀಘ್ರಲಿಪಿ ಪರೀಕ್ಷೆ (Stenography Test) ಹಾಗೂ ಸಂದರ್ಶನದ ಮೂಲಕ ನಡೆಯಲಿದೆ. ಪರೀಕ್ಷೆಯಲ್ಲಿ ಸಾಧನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯಾಲಯದ ನಿಯಮಾನುಸಾರ ವೇತನ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಲಭ್ಯವಾಗುತ್ತವೆ.

ಅರ್ಜಿ ಸಲ್ಲಿಕೆ ವಿಧಾನ:

ಅಭ್ಯರ್ಥಿಗಳು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.

ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಏಪ್ರಿಲ್ 15 ಅಂತಿಮ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.