ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್‌ನ್ಯೂಸ್‌; 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಕಾರಾಗೃಹ ಇಲಾಖೆ

Karnataka Prisons Department Recruitment 2026: ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯು ಉಳಿದ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೈಲರ್‌, ವಾರ್ಡರ್‌, ಇನ್‌ಸ್ಟ್ರಕ್ಟರ್‌ ಗ್ರೇಡ್‌ -II ಮುಂತಾದ ಗುದ್ದೆ ಇದಾಗಿದ್ದು, ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಅಪ್ಲೈ ಮಾಡಲು ಕೊನೆಯ ದಿನ ಅಕ್ಟೋಬರ್ 15.

ಚಾಟ್‌ಜಿಪಿಟಿ ರಚಿತ ಚಿತ್ರ

ಬೆಂಗಳೂರು, ಸೆ. 20: ರಾಜ್ಯ ಸರ್ಕಾರದ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎನ್ನುವುದು ಬಹುತೇಕ ಯುಜನತೆಯ ಕನಸು (Government Jobs). ಅಂತಹವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯು ಉಳಿದ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Karnataka Prisons Department Recruitment 2026). ಜೈಲರ್‌, ವಾರ್ಡರ್‌, ಇನ್‌ಸ್ಟ್ರಕ್ಟರ್‌ ಗ್ರೇಡ್‌ -II ಮುಂತಾದ ಗುದ್ದೆ ಇದಾಗಿದ್ದು, ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಅಕ್ಟೋಬರ್ 15.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿದ ಮೂಲ ವೃಂದ (RPC)ದಲ್ಲಿ 576 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ವೃಂದ (KK)ದಲ್ಲಿ 293 ಹುದ್ದೆಗಳಿವೆ. ಜೈಲರ್‌ ಹುದ್ದೆಗೆ ಪದವಿ (ಸಮಾಜ ಶಾಸ್ತ್ರ, ಅಪರಾಧ ಶಾಸ್ತ್ರ, ಮನಃಶಾಸ್ತ್ರ ವಿಷಯಗಳಲ್ಲಿ ಪದವಿ ಪಡೆದವರಿಗೆ ಆದ್ಯತೆ) ಪೂರೈಸಿರಬೇಕು, ವಾರ್ಡನ್‌ (ಪ್ರಿಸನ್‌ ಗಾರ್ಡ್‌) ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು, ಇನ್‌ಸ್ಟ್ರಕ್ಟರ್‌ ಗ್ರೇಡ್‌-II ಹುದ್ದೆಗೆ ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಮತ್ತು ಡಿಪ್ಲೋಮಾ ತೇರ್ಗಡೆ, ವಾರ್ಡನ್‌ ಕಂ ನರ್ಸಿಂಗ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು ಜತೆಗೆ ಫಸ್ಟ್ ಏಡ್ ಪ್ರಮಾಣಪತ್ರ ಹೊಂದಿರಬೇಕು. ವಾರ್ಡರ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾದರೆ ಸಾಕು.

ಬ್ಯಾಂಕ್‌ ಆಫ್‌ ಬರೋಡದಲ್ಲಿದೆ 1,100 ಹುದ್ದೆ; ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ವಯೋಮಿತಿ

ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 31 ವರ್ಷ ಹಾಗೂ SC / ST / Cat-1 / 2A / 2B / 3A / 3B ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ (ಒಎಂಆರ್‌ ಆಧಾರಿತ), ಶಾರೀರಿಕ ದಾರ್ಢ್ಯತೆ ಪರೀಕ್ಷೆ (PST/ET), ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಹಾಗೂ ವೈದ್ಯಕೀಯ ತಪಾಸಣೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 34,100 ರೂಪಾಯಿ-1,12,900 ರೂಪಾಯಿ ಮಾಸಿಕ ವೇತನವಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳು (2A, 2B, 3A, 3B) 750 ರೂಪಾಯಿ ಹಾಗೂ ಎಸ್‌ಸಿ, ಎಸ್‌ಟಿ, ಕ್ಯಾಟಗರಿ-1, ಮಾಜಿ ಸೈನಿಕರು ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳು 500 ರೂಪಾಯಿ ಆನ್‌ಲೈನ್‌ ಮೂಲಕ ಪಾವತಿಸಬೇಕು.

ಕಾರಾಗೃಹ ಇಲಾಖೆ ಅಧಿಸೂಚನೆ (RPC) ಓದಲು ಇಲ್ಲಿ ಕ್ಲಿಕ್‌ ಮಾಡಿ.

ಕಾರಾಗೃಹ ಇಲಾಖೆ ಅಧಿಸೂಚನೆ (KK) ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ(https://cetonline.karnataka.gov.in/kea/?utm_source=gemini)

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author