ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka TET 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ; ಪರೀಕ್ಷೆ ಯಾವಾಗ?

KAR TET: ರಾಷ್ಟ್ರೀಯ ಶಿಕ್ಷಣ ಶಿಕ್ಷಕರ ಪರಿಷತ್ (NCTE) 1 ರಿಂದ 8ನೇ ತರಗತಿಗಳ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಕನಿಷ್ಠ ಅರ್ಹತೆಗಳನ್ನು ನಿಗದಿಪಡಿಸಿದೆ. ಅದರಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTE ಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿ.ಇ.ಟಿ.) ಉತ್ತೀರ್ಣರಾಗಿರಬೇಕು.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ; ಪರೀಕ್ಷೆ ಯಾವಾಗ?

-

Prabhakara R Prabhakara R Oct 18, 2025 10:56 PM

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. 'ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ (Karnataka TET 2025) ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅ.23 ರಿಂದ ನ.9ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕುರಿತು ಹೆಚ್ಚಿನ ಮಾಹಿತಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವೆಬ್‌ಸೈಟ್‌ www.schooleducation.kar.nic.in ನಲ್ಲಿ ಪ್ರಕಟಿಸಿರುವ ಸೂಚನೆಗಳನ್ನು ಗಮನಿಸಬೇಕು ಎಂದು ಶಿಕ್ಷಣ ಇಲಖೆಯ ಕೇಂದ್ರೀಕೃತ ದಾಖಲಾತಿ ಘಟಕ ತಿಳಿಸಿದೆ.

ಟಿಇಟಿ ಕುರಿತ ವಿವರ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025 ಕ್ಕೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ https://schooleducation.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಹಾಗೂ ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ Print out ನ್ನು ಪಡೆದುಕೊಳ್ಳಬೇಕು.

ಪ್ರಮುಖ ದಿನಾಂಕಗಳು:

  1. ಅರ್ಜಿ ಸಲ್ಲಿಕೆ (Online): ಅ.23ರಿಂದ ನ.9ರವರೆಗೆ
  2. ಪರೀಕ್ಷೆ ದಿನಾಂಕ: (Offline)
    ಪತ್ರಿಕೆ-1: ದಿನಾಂಕ : 07/12/2025, ಭಾನುವಾರ
    ಸಮಯ: ಬೆಳಗ್ಗೆ 9.30 ರಿಂದ 12.00 ಗಂಟೆವರೆಗೆ
    ಪತ್ರಿಕೆ-2: ದಿನಾಂಕ-07/12/2025, ಭಾನುವಾರ
    ಸಮಯ : ಮಧ್ಯಾಹ್ನ 2ರಿಂದ 4.30 ಗಂಟೆವರೆಗೆ

ಪರೀಕ್ಷಾ ಶುಲ್ಕ ವಿವರ:

ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ

  • ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ-700 ರೂ.
  • ಪತ್ರಿಕೆ-1 ಹಾಗೂ ಪತ್ರಿಕೆ-2- 1000 ರೂ.

ಪ.ಜಾತಿ/ಪ.ವರ್ಗ/ಪ್ರವರ್ಗ-1

  • ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- 350 ರೂ.
  • ಪತ್ರಿಕೆ-1 ಹಾಗೂ ಪತ್ರಿಕೆ 2- 500 ರೂ.

(ವಿಶೇಷ ಚೇತನ/ದಿವ್ಯಾಂಗ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇರುತ್ತದೆ.)

ಪ್ರವೇಶ ಪತ್ರ:

ಅಭ್ಯರ್ಥಿಗಳು KARTET-2025 ಪರೀಕ್ಷೆಯ ಪ್ರವೇಶ ಪತ್ರವನ್ನು ಡಿ. 1 ರಿಂದ ಡಿ. 7ರವರೆಗೆ ಇಲಾಖಾ ವೆಬ್‌ಸೈಟ್‌ನಲ್ಲಿ Login ಆಗಿ ಪಡೆದುಕೊಳ್ಳಬಹುದು. ಅಭ್ಯರ್ಥಿಗಳ ಮಾಹಿತಿ, ಭಾವಚಿತ್ರ ಹಾಗೂ ಅವರ ಸಹಿಗೆ ಸಂಬಂಧಪಟ್ಟಂತೆ ಏನಾದರೂ ವ್ಯತ್ಯಾಸವಿದ್ದಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿರುವುದಿಲ್ಲ.

ಟಿಇಟಿ ಪರೀಕ್ಷೆ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

TET 2025

ಟಿಇಟಿ ಉದ್ದೇಶ

ರಾಷ್ಟ್ರೀಯ ಶಿಕ್ಷಣ ಶಿಕ್ಷಕರ ಪರಿಷತ್ (NCTE) 1 ರಿಂದ 8ನೇ ತರಗತಿಗಳ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಕನಿಷ್ಠ ಅರ್ಹತೆಗಳನ್ನು ನಿಗದಿಪಡಿಸಿದೆ. ಅದರಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTE ಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿ.ಇ.ಟಿ.) ಉತ್ತೀರ್ಣರಾಗಿರಬೇಕು.

ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಟಿ.ಇ.ಟಿ. ಯನ್ನು ಕನಿಷ್ಟ ಅರ್ಹತೆಯನ್ನಾಗಿ ಅಳವಡಿಸುವ

ಉದ್ದೇಶಗಳು:

  • ನೇಮಕಾತಿ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಮಾನದಂಡಗಳನ್ನು ಮತ್ತು ಶಿಕ್ಷಕರ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಲು.
  • ಶಿಕ್ಷಕ ಶಿಕ್ಷಣ ಸಂಸ್ಥೆಗಳು ಮತ್ತು ಪ್ರಶಿಕ್ಷಣಾರ್ಥಿಗಳು ತಮ್ಮ ಕಾರ್ಯಕ್ಷಮತೆಯ ಸುಧಾರಣೆಯನ್ನು ಪ್ರೇರೇಪಿಸಲು.
  • ಸರ್ಕಾರವು ಶಿಕ್ಷಕರ ಶೈಕ್ಷಣಿಕ ಗುಣಮಟ್ಟಕ್ಕೆ ವಿಶೇಷ ಒತ್ತು ನೀಡುತ್ತದೆ ಎಂಬ ಸಕಾರಾತ್ಮಕ ಸಂದೇಶವನ್ನು ಎಲ್ಲಾ ಭಾಗಿದಾರರಿಗೆ ನೀಡಲು.
  • ಕರ್ನಾಟಕ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET) ನಡೆಸುವ ಜವಾಬ್ದಾರಿಯನ್ನು ಕೇಂದ್ರೀಕೃತ ದಾಖಲಾತಿ ಘಟಕ (ಸಿ.ಎ.ಸಿ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕೆ.ಜಿ ರಸ್ತೆ ಬೆಂಗಳೂರು ಇವರಿಗೆ ವಹಿಸಿದೆ.

ಈ ಸುದ್ದಿಯನ್ನೂ ಓದಿ | Government job age limit: ರಾಜ್ಯ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್; ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಡಿ.31ರ ಒಳಗೆ ಫಲಿತಾಂಶ ಪ್ರಕಟ

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ, ಡಿ.31ರ ಒಳಗೆ ಫಲಿತಾಂಶ ಪ್ರಕಟಿಸಲಾಗುವುದು. ನಂತರ ಕಲ್ಯಾಣ ಕರ್ನಾಟಕ ಸೇರಿದಂತೆ 18 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಟಿಇಟಿ ನಡೆಸಲಾಗುವುದು. ಅಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.