ಬೆಂಗಳೂರು: ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಗೆ (KAS Recruitment 2026) ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 7ರವರೆಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿಸ್ತರಣೆ ಮಾಡಿದೆ. ಈ ಬಗ್ಗೆ ಕೆಪಿಎಸ್‌ಸಿಯಿಂದ ಮಂಗಳವಾರ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ.
ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 (ಉಳಿಕೆ ಮೂಲ ವೃಂದ 297 + ಹೈದ್ರಾಬಾದ್-ಕರ್ನಾಟಕ ವೃಂದ 22) ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲು ಜುಲೈ 31ರಂದು ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಆ.1ರಿಂದ ಆ. 31ರವರೆಗೆ ಅವಕಾಶ ನೀಡಲಾಗಿತ್ತು.
ಪ್ರಸ್ತುತ ಕೆಲವು ಅಭ್ಯರ್ಥಿಗಳು ಜಾತಿ ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಚೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಪ್ರಮಾಣ ಪತ್ರಗಳು ದೊರೆಯುತ್ತಿಲ್ಲ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಇಂಟರ್‌ನೆಟ್ ಸಂಪರ್ಕದ ಕೊರತೆಯಿಂದಾಗಿ ಶುಲ್ಕ ಪಾವತಿ ವೈಫಲ್ಯದ ಕಾರಣಗಳನ್ನು ನಮೂದಿಸುತ್ತಾ ONLINE ಮುಖಾಂತರ ಅರ್ಜಿ ಸಲ್ಲಿಸಲು ಸಾಧ್ಯವಾಗದ ಕಾರಣ ನಿಗದಿಪಡಿಸಲಾಗಿರುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುತ್ತಾರೆ.
ಅಭ್ಯರ್ಥಿಗಳ ಮನವಿಗಳನ್ನು ಪರಿಶೀಲಿಸಿ, ಅವರ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7ವರೆಗೆ ವಿಸ್ತರಿಸಲಾಗಿದೆ. ಇನ್ನುಳಿದಂತೆ ದಿನಾಂಕ: 31-07-2026ರ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ .ಕೆ ಅವರು ತಿಳಿಸಿದ್ದಾರೆ.
319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಕುರಿತ ವಿವರ
2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 (ಉಳಿಕೆ ಮೂಲ ವೃಂದ 297 + ಹೈ-ಕ ವೃಂದ 22) ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಭಾವಿ ಪರೀಕ್ಷೆಗೆ (kas prelims exam) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳೂ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು.ಸಾಮಾನ್ಯ ಅರ್ಹತೆ: ಗರಿಷ್ಠ 40 ವರ್ಷ ಒಬಿಸಿ ಪ್ರವರ್ಗ 2ಎ, 2ಬಿ, 3ಎ, 3ಬಿ: ಗರಿಷ್ಠ 43 ವರ್ಷ ಎಸ್‌ಸಿ, ಎಸ್‌ಟಿ, ಪ್ರವರ್ಗ-1: ಗರಿಷ್ಠ 45 ವರ್ಷ
(ವಿಶೇಷ ಸೂಚನೆ: ಸರ್ಕಾರದ ಆದೇಶದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ).
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ: 600 ರೂ. ಒಬಿಸಿ ಪ್ರವರ್ಗ 2ಎ, 2ಬಿ, 3ಎ, 3ಬಿ: 300 ರೂ. ಮಾಜಿ ಸೈನಿಕ: 50 ರೂ. SC/ST/Cat-1/ವಿಕಲಚೇತನ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿIBPS PO–2026: ಬ್ಯಾಂಕ್ ಅಧಿಕಾರಿಯಾಗುವ ಕನಸಿಗೆ ಇಲ್ಲಿದೆ ಸುವರ್ಣಾವಕಾಶ; ಪರೀಕ್ಷಾ ಮಾದರಿಯಲ್ಲಾದ ಮಹತ್ವದ ಬದಲಾವಣೆ ಗಮನಿಸಿಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗೆ ಕೆಪಿಎಸ್‌ಸಿ ವೆಬ್‌ಸೈಟ್ http://kpsc.kar.nic.in/ ನೋಡಬಹುದಾಗಿದೆ.
ಕೆಎಎಸ್ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
GP 2026-27 Final Notification with PH Schedules HOSTED ON 31-07-2026 (1)