ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KSRP Police Constable Result 2026: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ಕೆಇಎ

KSRP Constable Recruitment 2026: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಬೆಂಗಳೂರು: ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್‌, ಐಆರ್‌ಬಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ (KSRP Police Constable Result 2026) ಸೆ.20ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಪ್ರಕಟಿಸಿದೆ. ದಾಖಲೆ ಅವಧಿ ಅಂದರೆ ಪರೀಕ್ಷೆ ನಡೆದ ಐದು ದಿನಗಳಲ್ಲಿಯೇ ಫಲಿತಾಂಶ ಪ್ರಕಟಿಸಿರುವುದು ವಿಶೇಷವಾಗಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಕೀ ಉತ್ತರಗಳನ್ನು ಸೆ.21ರಂದು ಪ್ರಕಟಿಸಿ, ಸೆ.23ರ ಬೆಳಗ್ಗೆ 10.30 ರವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಸೆ.27ರ 5:30 ಗಂಟೆಯೊಳಗೆ ಸಲ್ಲಿಸಬಹುದು. ಪೂರಕ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ.

ಕಾನ್ಸ್‌ಟೇಬಲ್ ಹುದ್ದೆ ಪರೀಕ್ಷೆಯ ಫಲಿತಾಂಶಕ್ಕಾಗಿ ಈ ಲಿಂಕ್‌kearecruitment ಕ್ಲಿಕ್‌ ಮಾಡಿ.