KEA Recruitment 2025: ವಿವಿಧ ಇಲಾಖೆಗಳ 708 ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆ ಅವಧಿ ನ.14ರವರೆಗೆ ವಿಸ್ತರಣೆ
Job News: ವಿವಿಧ ಇಲಾಖೆಗಳಲ್ಲಿನ 708 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.31 ನಿಗದಿಯಾಗಿತ್ತು. ಆದರೆ, ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೆ 14 ದಿನ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
 
                                -
 Prabhakara R
                            
                                Oct 31, 2025 9:40 PM
                                
                                Prabhakara R
                            
                                Oct 31, 2025 9:40 PM
                            ಬೆಂಗಳೂರು, ಅ.31: ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿನ 708 ಹುದ್ದೆಗಳ ನೇಮಕಾತಿಗೆ (KEA Recruitment 2025) ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅ.31 ನಿಗದಿಯಾಗಿತ್ತು. ಆದರೆ, ಅರ್ಜಿ ಸಲ್ಲಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಇದೀಗ ಮತ್ತೆ 14 ದಿನ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಕೆಇಎ ಪ್ರಕಟಣೆ ಹೊರಡಿಸಿದೆ. ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆ/ನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಗಳನ್ನು ಆಹ್ವಾನಿಸಿ ಅ.8ರಂದು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಪ್ರತ್ಯೇಕವಾಗಿ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು. ಈ ಅಧಿಸೂಚನೆಯಲ್ಲಿ ಅ.08 ರಿಂದ 31ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಇದೀಗ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಪ್ರಾಧಿಕಾರವು ನ.31 ರಂದು ಅಧಿಸೂಚನೆ ಹೊರಡಿಸಿದೆ. ಅಲ್ಲದೇ ಈಗಾಗಲೇ ಅಧಿಸೂಚನೆ ಹೊರಡಿಸಿದ ಇಲಾಖೆ/ಸಂಸ್ಥೆಗಳ 708 ಹುದ್ದೆಗಳ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕೆಇಎ ತಿಳಿಸಿದೆ.
ಕೊನೆಯ ದಿನಾಂಕ ಯಾವಾಗ?
- ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 14
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 15

ಅರ್ಹತಾ ನಿಬಂಧನೆಗಳು ಹಾಗೂ ಇತರೆ ವಿವರಗಳಿಗಾಗಿ ದಿನಾಂಕ: 08.10.2025 ಹಾಗೂ ದಿನಾಂಕ 31.10.2025ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ ಕೆಇಎ ಸೂಚಿಸಿದೆ.
ಅರ್ಜಿ ಸಲ್ಲಿಸಲು ಕೆಇಎ ವೆಬ್‌ಸೈಟ್‌ಗೆ ಭೇಟಿ https://cetonline.karnataka.gov.in/kea/indexnew
ಈ ಸುದ್ದಿಯನ್ನೂ ಓದಿ | KSSIDC Recruitment 2025: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 44 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿವಿಧ ಇಲಾಖೆಗಳಲ್ಲಿ 708 ಖಾಲಿ ಹುದ್ದೆ ಭರ್ತಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲ ಸೇರಿ 8 ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಕೆಇಎ ಅ.8ರಂದು ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 8 ರಿಂದ 31 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆ ಉಂಟಾಗಿದ್ದರಿಂದ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರಲಿಲ್ಲ. ಹೀಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ನ.14ರವರೆಗೆ ಕೆಇಎ ವಿಸ್ತರಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆಯಲ್ಲಿನ ಒಟ್ಟು 708 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು.
 
            