KEA Recruitment: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ; 4,744 ಹುದ್ದೆಗಳ ನೇಮಕಾತಿಗೆ ಕೆಇಎ ಸಿದ್ಧತೆ, ಇದೇ ತಿಂಗಳಲ್ಲಿ ಅಧಿಸೂಚನೆ!
Job News: ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ತಾಂತ್ರಿಕೇತರ ಹಾಗೂ ತಾಂತ್ರಿಕ- ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಈಗಾಗಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಹಲವು ನೇಮಕಾತಿ ಅಧಿಸೂಚನೆಗಳು ಹೊರಬಿದ್ದಿವೆ. ಇದೀಗ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಇದೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment) ಸಿದ್ಧತೆ ನಡೆಸಿದೆ.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ತಾಂತ್ರಿಕೇತರ ಹಾಗೂ ತಾಂತ್ರಿಕ- ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ.
#KEA Recruitment:
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 1, 2026
ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ತಾಂತ್ರಿಕೇತರ ಹಾಗೂ ತಾಂತ್ರಿಕ- ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ.
ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ.
ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ…
KAS Recruitment 2026: 319 ಕೆಎಎಸ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಅವಧಿ ಸೆ.7ರವರೆಗೆ ವಿಸ್ತರಣೆ
ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಹಾಗೂ ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ತಾಂತ್ರಿಕ ಹುದ್ದೆಗಳು 261 ಇದ್ದು, ನಂತರದ ದಿನಗಳಲ್ಲಿ ಇನ್ನೂ ಹೊಸ ಇಲಾಖೆ ಮತ್ತು ಹುದ್ದೆಗಳು ಸೇರುವ ಸಾಧ್ಯತೆ ಇದೆ. ಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ
VER_REC_NOTE_31082026kannada (1)


