ಉದ್ಯೋಗಾಂಕ್ಷಿಗಳ ಗಮನಕ್ಕೆ...: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ದಿನಾಂಕ ಮತ್ತೊಮ್ಮೆ ವಿಸ್ತರಣೆ
KEA Recruitment: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಸ ಹೊರಡಿಸಿದೆ. ಹೊಸ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಆಗಸ್ಟ್ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನ ಆಗಸ್ಟ್ 21.
ಚಾಟ್‌ಜಿಪಿಟಿ ರಚಿತ ಚಿತ್ರ ಮತ್ತು ಸಾಂದರ್ಭಿಕ ಚಿತ್ರ -
ಬೆಂಗಳೂರು, ಆ. 6: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಮುಂದಾಗುವ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ ಇದೀಗ ಮಹತ್ವದ ಅಪ್‌ಡೇಟ್ ಪ್ರಕಟಿಸಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಕಲ್ಯಾಣ ಕರ್ನಾಟಕ (KK) ಮತ್ತು ಉಳಿಕೆ ಮೂಲ ವೃಂದದಲ್ಲಿ(RPC) ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆ (VAO Recruitment 2026) ಇದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದ್ದು, ಇದೀಗ ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದೆ. ಹೊಸ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಆಗಸ್ಟ್ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನ ಆಗಸ್ಟ್ 21.
ವಿಶೇಷ ಎಂದರೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಬದಲಾಗುತ್ತಿರುವುದು ಇದು 2ನೇ ಬಾರಿ. ಆರಂಭದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಜುಲೈ 30 ಮತ್ತು ಶುಲ್ಕ ಪಾವತಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಅದನ್ನು ಆಗಸ್ಟ್ 7 ಮತ್ತು 8ಕ್ಕೆ ಮರುನಿಗದಿಪಡಿಸಲಾಯಿತು. ಇದೀಗ ಇನ್ನೂ 13 ದಿನ ಹೆಚ್ಚುವರಿಯಾಗಿ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ:
#KEARecruitment: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಆಗಸ್ಟ್ 20ರವರೆಗೆ #KEA ವಿಸ್ತರಿಸಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 6, 2026
ಶುಲ್ಕ ಪಾವತಿಸಲು ಆಗಸ್ಟ್ 21 ಕೊನೆ ದಿನ.
ಸಾರ್ವಜನಿಕರ ಕೋರಿಕೆ ಮೇರೆಗೆ ಆ.7ಕ್ಕೆ ಇದ್ದ ಕೊನೆ ದಿನಾಂಕ ವಿಸ್ತರಿಸಲಾಗಿದೆ.
ಕಲ್ಯಾಣ ಕರ್ನಾಟಕ ವೃಂದಕ್ಕೆ ಅರ್ಜಿ ಸಲ್ಲಿಸುವವರಿಗೂ ಅನ್ವಯವಾಗುತ್ತದೆ.… pic.twitter.com/mR1Uq9sHur
ಪ್ರಕಟಣೆಯಲ್ಲಿ ಏನಿದೆ?
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 10ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಹ ಅಭ್ಯಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿ, ಜುಲೈ 30ರವರೆಗೆ ಅರ್ಜಿ ಸಲ್ಲಿಸಲು ಮತ್ತು ಜುಲೈ 31ರವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಿತ್ತು. ಅದಾದ ಬಳಿಕ ಜುಲೈ 29ರಂದು ಪ್ರಕಟಣೆ ಹೊರಡಿಸಿ ದಿನಾಂಕ ಆಗಸ್ಟ್ 7ರವರೆಗೆ ದಿನಾಂಕ ವಿಸ್ತರಿಸಿ ಅರ್ಜಿಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಸ್ತುತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.08.2026.
ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ 21.08.2026. ಉಳಿದಂತೆ ನಿಯಮಗಳು ಅದೇ ರೀತಿ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
319 ಕೆಎಎಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ
ಪರೀಕ್ಷಾ ವಿಧಾನ
ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮೂಲಕ ನಡೆಯಲಿದೆ. ಅದರಂತೆ, ಪರೀಕ್ಷೆಯಲ್ಲಿ ಎರಡು ಪತ್ರಿಕೆಗಳಿರುತ್ತವೆ. ಬೆಳಗ್ಗೆ 10.30ರಿಂದ 12.30ರವರೆಗೆ ಮೊದಲ ಪತ್ರಿಕೆ ಮತ್ತು ಮಧ್ಯಾಹ್ನ 2.30ರಿಂದ 4.30ರವರೆಗೆ ಎರಡನೇ ಪತ್ರಿಕೆ ನಡೆಯಲಿದೆ. ಇನ್ನೂ, ಪ್ರತಿ ಪತ್ರಿಕೆಗೆ 100 ಅಂಕಗಳು ಮತ್ತು 100 ಪ್ರಶ್ನೆಗಳಿರುತ್ತವೆ. ತಪ್ಪು ಉತ್ತರಕ್ಕೆ 0.25 ನೆಗೆಟಿವ್ ಅಂಕ ಕಡಿತ ಮಾಡಲಾಗುತ್ತದೆ. ಅದರಲ್ಲೂ, ಪರೀಕ್ಷೆಯು ಆಫ್‌ಲೈನ್ ಒಎಂಆರ್ ಮಾದರಿಯಲ್ಲಿ ನಡೆಯಲಿದ್ದು, ಮೆರಿಟ್ ಆಧಾರದಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.