ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

KEA VAO Answer Key 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ ಕೀ ಉತ್ತರಗಳು ಪ್ರಕಟ; ಇಲ್ಲಿದೆ ಲಿಂಕ್

ಅ.04ರಂದು ಉಳಿಕೆ ಮೂಲ ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಅ.8ರ ಬೆಳಗ್ಗೆ 10.30ರವರೆಗೆ ಅವಕಾಶ ಕಲ್ಪಿಸಲಾಗಿದೆ.

‌ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ ಕೀ ಉತ್ತರ ಪ್ರಕಟ; ಇಲ್ಲಿದೆ ಲಿಂಕ್

-

Prabhakara R
Prabhakara R Oct 6, 2026 2:22 PM

ಬೆಂಗಳೂರು: ಉಳಿಕೆ ಮೂಲ ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ಅ.04ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು (KEA VAO Answer Key 2026) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ https://cetonline.karnataka.gov.in/keaobjections/forms/login.aspx ಅ.8ರ ಬೆಳಗ್ಗೆ 10.30ರೊಳಗೆ ಸಲ್ಲಿಸಬಹುದಾಗಿರುತ್ತದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು.

ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ.25/-ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ/ಆಧಾರರಹಿತವಾಗಿರುವ ಹಾಗೂ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ, ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ ಎಂದು ಕೆಇಎ ತಿಳಿಸಿದೆ.

ವಿಎಒ (RPC) ಪರೀಕ್ಷೆ ಕೀ ಉತ್ತರಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ