ಬೆಂಗಳೂರು: ಉಳಿಕೆ ಮೂಲ ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ಅ.04ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು (KEA VAO Answer Key 2026) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.
ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ https://cetonline.karnataka.gov.in/keaobjections/forms/login.aspx ಅ.8ರ ಬೆಳಗ್ಗೆ 10.30ರೊಳಗೆ ಸಲ್ಲಿಸಬಹುದಾಗಿರುತ್ತದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು.
ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ.25/-ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣಾ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ/ಆಧಾರರಹಿತವಾಗಿರುವ ಹಾಗೂ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ, ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ ಎಂದು ಕೆಇಎ ತಿಳಿಸಿದೆ.
ವಿಎಒ (RPC) ಪರೀಕ್ಷೆ ಕೀ ಉತ್ತರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
VAO_KEY_WITH_NOTE_06102026kannada
ರಾಜ್ಯದ ಒಟ್ಟು 1,037 ಕೇಂದ್ರಗಳಲ್ಲಿ ಪರೀಕ್ಷೆ
ಉಳಿಕೆ ಮೂಲ ವೃಂದದ ಒಟ್ಟು 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಅ.4ರಂದು ಲಿಖಿತ ಪರೀಕ್ಷೆ ನಡೆದಿತ್ತು. ಒಟ್ಟು 4,11,656 ಅಭ್ಯರ್ಥಿಗಳ ಪೈಕಿ ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯನ್ನು 3,04,096 (ಶೇ 74ರಷ್ಟು) ಮಂದಿ ಬರೆದಿದ್ದು, ಮಧ್ಯಾಹ್ಮದ ನಿರ್ದಿಷ್ಟ ಪತ್ರಿಕೆಯನ್ನು 3,03,058 ಮಂದಿ ಬರೆದಿದ್ದರು.
ರಾಜ್ಯದ ಒಟ್ಟು 1,037 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಧಾರವಾಡದಲ್ಲಿ ಅತಿ ಹೆಚ್ಚು ಅಂದರೆ 60 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲೆಡೆ ಬಿಗಿ ನಿಗಾ ವ್ಯವಸ್ಥೆ ಮಾಡಲಾಗಿತ್ತು.