ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

KAS Recruitment 2026: 319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

KPSC Gazetted Probationers Recruitment: 319 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು 2026ರ ನವೆಂಬರ್ 15 ರಂದು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.

319 ಕೆಎಎಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

-

Prabhakara R
Prabhakara R Jul 31, 2026 8:51 PM

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 (ಉಳಿಕೆ ಮೂಲ ವೃಂದ 297 + ಹೈ-ಕ ವೃಂದ 22) ಹುದ್ದೆಗಳನ್ನು (KAS Recruitment 2026) ಭರ್ತಿ ಮಾಡಲು ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2026
ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 15-11-2026

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳೂ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು.

ಸಾಮಾನ್ಯ ಅರ್ಹತೆ: ಗರಿಷ್ಠ 40 ವರ್ಷ
ಒಬಿಸಿ ಪ್ರವರ್ಗ 2ಎ, 2ಬಿ, 3ಎ, 3ಬಿ: ಗರಿಷ್ಠ 43 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: ಗರಿಷ್ಠ 45 ವರ್ಷ

(ವಿಶೇಷ ಸೂಚನೆ: ಸರ್ಕಾರದ ಆದೇಶದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ).

ಪರೀಕ್ಷಾ ವಿಧಾನ:

ನೇಮಕಾತಿಯು ಎರಡು ಹಂತಗಳಲ್ಲಿ ನಡೆಯಲಿದೆ:

ಪೂರ್ವಭಾವಿ ಪರೀಕ್ಷೆ: ವಸ್ತುನಿಷ್ಠ (MCQ) ಮಾದರಿಯ 2 ಪತ್ರಿಕೆಗಳು. ಪ್ರತಿಯೊಂದು ಪತ್ರಿಕೆಯು 100 ಪ್ರಶ್ನೆಗಳು ಹಾಗೂ 200 ಅಂಕಗಳನ್ನು ಹೊಂದಿದ್ದು, ತಪ್ಪು ಉತ್ತರಗಳಿಗೆ 0.25 (1/4th) ಋಣಾತ್ಮಕ ಮೌಲ್ಯಮಾಪನ (Negative Marking) ಇರುತ್ತದೆ.

ಮುಖ್ಯ ಪರೀಕ್ಷೆ ಹಾಗೂ ವ್ಯಕ್ತಿತ್ವ ಪರೀಕ್ಷೆ: ಮುಖ್ಯ ಪರೀಕ್ಷೆಯು ವಿವರಣಾತ್ಮಕ (Descriptive) ಮಾದರಿಯಲ್ಲಿದ್ದು ಒಟ್ಟು 1250 ಅಂಕಗಳನ್ನು ಹೊಂದಿರುತ್ತದೆ. ಅರ್ಹತಾದಾಯಕ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಕನಿಷ್ಠ ಶೇ. 35 ಅಂಕಗಳಿಸುವುದು ಕಡ್ಡಾಯ. ವ್ಯಕ್ತಿತ್ವ ಪರೀಕ್ಷೆಯು 25 ಅಂಕಗಳಿಗೆ ನಡೆಯಲಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ: 600 ರೂ.
ಒಬಿಸಿ ಪ್ರವರ್ಗ 2ಎ, 2ಬಿ, 3ಎ, 3ಬಿ: 300 ರೂ.
ಮಾಜಿ ಸೈನಿಕ: 50 ರೂ.
SC/ST/Cat-1/ವಿಕಲಚೇತನ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ

IBPS PO–2026: ಬ್ಯಾಂಕ್ ಅಧಿಕಾರಿಯಾಗುವ ಕನಸಿಗೆ ಇಲ್ಲಿದೆ ಸುವರ್ಣಾವಕಾಶ; ಪರೀಕ್ಷಾ ಮಾದರಿಯಲ್ಲಾದ ಮಹತ್ವದ ಬದಲಾವಣೆ ಗಮನಿಸಿ

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗೆ ಕೆಪಿಎಸ್‌ಸಿ ವೆಬ್‌ಸೈಟ್ http://kpsc.kar.nic.in/ ನೋಡಬಹುದಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗುವ ಪರೀಕ್ಷೆಗಳು ಹಾಗೂ ವ್ಯಕ್ತಿತ್ವ ಪರೀಕ್ಷೆಯ ಸಂಭಾವ್ಯ ದಿನಾಂಕಗಳು ಹಾಗೂ ಫಲಿತಾಂಶ ಪ್ರಕಟಣೆ ಸಂಭಾವ್ಯ ದಿನಾಂಕಗಳ (Tentative) ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಕೆಎಎಸ್‌ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

GP 2026-27 Final Notification with PH Schedules HOSTED ON 31-07-2026 (1)