KSDA Recruitment 2025: ಗಮನಿಸಿ; ಕೃಷಿ ಇಲಾಖೆಯಲ್ಲಿನ 945 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಮೊದಲು ಅಪ್ಲೈ ಮಾಡಲು ಫೆ. 1 ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಫೆ. 15ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
![KSDA Recruitment 2025](https://cdn-vishwavani-prod.hindverse.com/media/images/KSDA_Recruitment_2025.max-1280x720.jpg)
![Profile](https://vishwavani.news/static/img/user.5c7ca8245eec.png)
ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಉತ್ತಮ ಅವಕಾಶ ಕಾದು ಕುಳಿತಿದೆ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ (KSDA Recruitment 2025). ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ (Agricultural Officers, Assistant Agricultural Officers) ಸೇರಿ ಒಟ್ಟು 945 ಹುದ್ದೆಗಳಿವೆ. ಈ ಮೊದಲು ಅಪ್ಲೈ ಮಾಡಲು ಫೆ. 1 ಕೊನೆಯ ದಿನ ಎಂದು ಹೇಳಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಫೆ. 15ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಕೃಷಿ ಅಧಿಕಾರಿ - 128 ಮತ್ತು ಸಹಾಯಕ ಕೃಷಿ ಅಧಿಕಾರಿ - 817 ಹುದ್ದೆಗಳಿವೆ. ಭಾರತದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಎಸ್‌ಸಿ, ಕೃಷಿ ಹಾಗೂ ಇತರ ಕೃಷಿ ಮತ್ತು ಆಹಾರ ಸಂಬಂಧಿತ ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ/ಕ್ಯಾಟಗರಿ-1 ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯುಡಿ/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಇತರ ಹಿಂದುಳಿದ ಎಲ್ಲ ವರ್ಗದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಯುಪಿಐ ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಕೃಷಿ ಅಧಿಕಾರಿ ಹುದ್ದೆಗಳಿಗೆ 43,100 ರೂ. - 83,900 ರೂ. ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ 40,900 ರೂ. - 78,200 ರೂ. ಮಾಸಿಕ ವೇತನ ದೊರೆಯಲಿದೆ.
ದಿನಾಂಕ ವಿಸ್ತರರಣೆಯ ಪ್ರಕಟಣೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಇಲಾಖೆ ಹುದ್ದೆಗಳಿಗೆ ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಶುಲ್ಕ, ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಎಸ್‌ಸಿ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://kpsconline.karnataka.gov.in/Notification/LandingPageNotificationslistApplicants)
* ಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ(ಉಳಿಕೆ ಮೂಲ ವೃಂದ) ಅಥವಾ ಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ(ಹೈ.ಕ) ಎಂದಿರುವ ಲಿಂಕ್‌ನಲ್ಲಿ ʼApplyʼ ಆಯ್ಕೆ ಸೆಲೆಕ್ಟ್ ಮಾಡಿ.
* 'New Registration' ಎಂದಿರುವ ಬಟನ್ ಮೇಲೆ ಕ್ಲಿಕ್ ಮಾಡಿ.
* ಅಗತ್ಯ ಮಾಹಿತಿ ನೀಡಿ ರಿಜಿಸ್ಟ್ರೇಷನ್ ಮಾಡಿ. ನಂತರ ಮತ್ತೆ ಲಾಗಿನ್ ಆಗಿ ಅರ್ಜಿ ಸಲ್ಲಿಸಿ.
* ಈಗಾಗಲೇ ಕೆಪಿಎಸ್‌ಸಿ ವೆಬ್‌ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ಯೂಸರ್ ನೇಮ್, ಪಾಸ್‌ವರ್ಡ್ ನೀಡಿ ಲಾಗಿನ್ ಆಗಲು 'Login' ಎಂದಿರುವಲ್ಲಿ ಕ್ಲಿಕ್ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-30574957/30574901ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ: Job Guide: ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್‌ನಲ್ಲಿದೆ 740 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ