KSDA Recruitment 2026: 945 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
Job Guide: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 672 ಮತ್ತು ಕಲ್ಯಾಣ ಕರ್ನಾಟ ವೃಂದದಲ್ಲಿ 273-ಹೀಗೆ ಒಟ್ಟು 945 ಹುದ್ದೆಗಳಿದ್ದು, ಪದವಿ ಪೂರೈಸಿದವರು ಅಪ್ಲೈ ಮಾಡಬಹುದು. ಕೊನೆಯ ದಿನಾಂಕ ಜೂನ್ 20.
ಚಾಟ್‌ಜಿಪಿಟಿ ರಚಿತ ಚಿತ್ರ -
ಬೆಂಗಳೂರು, ಜೂ. 7: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್ (Job Guide). ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಅಧಿಸೂಚನೆಯಲ್ಲಿ ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ (KSDA Recruitment 2026). ಉಳಿಕೆ ಮೂಲ ವೃಂದ (RPC)ದಲ್ಲಿ 672 ಮತ್ತು ಕಲ್ಯಾಣ ಕರ್ನಾಟ ವೃಂದ (KK)ದಲ್ಲಿ 273-ಹೀಗೆ ಒಟ್ಟು 945 ಹುದ್ದೆಗಳಿದ್ದು, ಪದವಿ ಪೂರೈಸಿದವರು ಅಪ್ಲೈ ಮಾಡಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್ 20.
ಹುದ್ದೆಗಳ ವಿವರ
ಉಳಿಕೆ ಮೂಲ ವೃಂದದಲ್ಲಿ ಕೃಷಿ ಅಧಿಕಾರಿ-86, ಸಹಾಯಕ ಕೃಷಿ ಅಧಿಕಾರಿ-586 ಹುದ್ದೆಗಳಿವೆ. ಇನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕೃಷಿ ಅಧಿಕಾರಿ-42, ಸಹಾಯಕ ಕೃಷಿ ಅಧಿಕಾರಿ-231 ಹುದ್ದೆಗಳಿವೆ.
ವಿದ್ಯಾರ್ಹತೆ
ಕೃಷಿ ಅಧಿಕಾರಿ: ಬಿಎಸ್‌ಸಿ (ಕೃಷಿ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಕೃಷಿ ಮಾರಾಟ ಮತ್ತು ಸಹಕಾರ, ಬ್ಯುಸಿನೆಸ್ ಮ್ಯಾನೇಜ್‌ಮೆಂಟ್, ಕೃಷಿ ಜೈವಿಕ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಅಗ್ರಿಕಲ್ಚರಲ್ ಎಂಜಿನಿಯನಿಯರಿಂಗ್), ಬಿ.ಟೆಕ್ (ಅಗ್ರಿಕಲ್ಚರಲ್ ಎಂಜಿನಿಯರಿಂಗ್).
ಸಹಾಯಕ ಕೃಷಿ ಅಧಿಕಾರಿ: ಬಿಎಸ್‌ಸಿ (ಕೃಷಿ), ಬಿಎಸ್‌ಸಿ (ಆನರ್ಸ್) ಕೃಷಿ, ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ, ಆಹಾರ ತಂತ್ರಜ್ಞಾನ), ಬಿಎಸ್‌ಸಿ (ಕೃಷಿ ಮಾರಾಟ ಮತ್ತು ಸಹಕಾರ, ಅಗ್ರಿ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್).
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಬರೋಬ್ಬರಿ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಇತರ ಪ್ರವರ್ಗ (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು 750 ರುಪಾಯಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗದ ಅಭ್ಯರ್ಥಿಗಳು 500 ರುಪಾಯಿ, ವಿಶೇಷ ಚೇತನ ಅಭ್ಯರ್ಥಿಗಳು 250 ರುಪಾಯಿ ಪಾವತಿಸಬೇಕು.
ಆಯ್ಕೆ ವಿಧಾನ
ಕನ್ನಡ ಭಾಷೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 69,250 ರುಪಾಯಿ – 1,34,200 ರುಪಾಯಿ ಮಾಸಿಕ ವೇತನ ದೊರೆಯಲಿದೆ.
ಮುಖ್ಯ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: ಮೇ 30.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 20.
- ಶುಲ್ಕ ಪಾವತಿಗೆ ಕೊನೆಯ ದಿನಾಂಕ: ಜೂನ್ 22.
ಕೃಷಿ ಇಲಾಖೆ (RPC) ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಇಲಾಖೆ (KK) ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- RPC ವೃಂದದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://cetonline.karnataka.gov.in/kearecruitment2026app/login) - KK ವೃಂದದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://cetonline.karnataka.gov.in/kearecruitment2026app/login)
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.
ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.