ಬೆಂಗಳೂರು, ಮಾ. 16: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ಉತ್ತಮ ಅವಕಾಶವನ್ನು ಒದಗಿಸಿದೆ. ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ, ಒಟ್ಟು 81 ಟ್ರೈನಿ ಎಂಜಿನಿಯರ್ (Trainee Engineer) ಹುದ್ದೆಗಳನ್ನು (Job Alert) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು 2026 ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
NHPC ಸಂಸ್ಥೆಯಲ್ಲಿ ವಿವಿಧ ಎಂಜಿನಿಯರಿಂಗ್ ವಿಭಾಗಗಳಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗಳು ಲಭ್ಯವಿದೆ.
- ಸಿವಿಲ್ ಎಂಜಿನಿಯರಿಂಗ್
- ಎಲೆಕ್ಟ್ರಿಕಲ್ ಎಂಜಿನಿಯರಿಂಗ್
- ಮೆಕ್ಯಾನಿಕಲ್ ಎಂಜಿನಿಯರಿಂಗ್
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ (BE), ಬಿಟೆಕ್ (B.Tech) ಅಥವಾ ಬಿಎಸ್ಸಿ B.Sc (Engineering) ಪದವಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ: 30 ವರ್ಷ ಮೀರಿರಬಾರದು. ಒಬಿಸಿ (Non-Creamy Layer) ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ. SC/ST ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ. PwD ಅಭ್ಯರ್ಥಿಗಳಿಗೆ: ಸಾಮಾನ್ಯ ವರ್ಗ: 10 ವರ್ಷ ಹೆಚ್ಚುವರಿ, OBC: 13 ವರ್ಷ ಹೆಚ್ಚುವರಿ, SC/ST: 15 ವರ್ಷ ಹೆಚ್ಚುವರಿ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಸರ್ಕಾರಿ ನಿಯಮಾನುಸಾರ ಮೀಸಲು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವೇತನ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು 50,000 ರುಪಾಯಿಂದ 1,60,000 ರುಪಾಯಿವರೆಗೆ ವೇತನ ಹಾಗೂ ಇತರೆ ಭತ್ಯೆಗಳು ದೊರೆಯಲಿವೆ.
ಆಯ್ಕೆ ಪ್ರಕ್ರಿಯೆ
ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮುಖ್ಯವಾಗಿ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:
- GATE 2024 ಅಥವಾ GATE 2025 ಅಂಕಗಳು
- ಗುಂಪು ಚರ್ಚೆ (Group Discussion)
- ವೈಯಕ್ತಿಕ ಸಂದರ್ಶನ (Personal Interview)
GATE ಅಂಕಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮುಂದಿನ ಹಂತಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿದೆ 25 ಹುದ್ದೆ; ಸ್ಟೆನೋಗ್ರಾಫರ್, ಟೈಪಿಸ್ಟ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
- SC / ST / ಮಹಿಳಾ ಅಭ್ಯರ್ಥಿಗಳು / ಮಾಜಿ ಸೈನಿಕರು – ಯಾವುದೇ ಶುಲ್ಕವಿಲ್ಲ
- ಇತರ ಅಭ್ಯರ್ಥಿಗಳಿಗೆ 708 ರೂ. ಅರ್ಜಿ ಶುಲ್ಕವಿದ್ದು, ಆನ್‌ಲೈನ್ ಮೂಲಕ ಪಾವತಿಸಬೇಕು
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು NHPC ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಅಗತ್ಯ.
ಗಮನಿಸಬೇಕಾದ ಪ್ರಮುಖ ವಿಷಯಗಳು
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಏಪ್ರಿಲ್ 6, 2026
ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಸಂಖ್ಯೆಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಸಂರಕ್ಷಿಸಿ ಇಟ್ಟುಕೊಳ್ಳಬೇಕು
ಈ ನೇಮಕಾತಿ ಎಂಜಿನಿಯರಿಂಗ್ ಪದವೀಧರರಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡುವ ಉತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಸಮಯ ಮೀರದಂತೆ ಅರ್ಜಿ ಸಲ್ಲಿಸುವುದು ಉತ್ತಮ.