Railway Recruitment 2025: ರೈಲ್ವೆ ನೇಮಕಾತಿ ಮಂಡಳಿಯಿಂದ 8,860 ಹುದ್ದೆಗಳಿಗೆ ನೇಮಕಾತಿ; ಆನ್‌ಲೈನ್ ಮೂಲಕ ಅಪ್ಲೈ ಮಾಡಿ
Indian Railway Department: ದೇಶದಾದ್ಯಂತದ ರೈಲ್ವೆ ನೇಮಕಾತಿ ಮಂಡಳಿ 8,860 ಎನ್‌ಟಿಪಿಸಿ (NTPC) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿside. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆ ದಿನವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಇಲ್ಲಿದೆ ಸಂಪೂರ್ಣ ವಿವರ.
ರೈಲ್ವೆ ನೇಮಕಾತಿ -
ದೆಹಲಿ, ಡಿ. 9: ದೇಶದಾದ್ಯಂತದ ರೈಲ್ವೆ ನೇಮಕಾತಿ ಮಂಡಳಿ (RRBs) ಸ್ಟೇಷನ್ ಮಾಸ್ಟರ್ ಹಾಗೂ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 8,860 ಎನ್‌ಟಿಪಿಸಿ (NTPC) ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಕೆ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಡಿಸೆಂಬರ್ 12ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ಇದೆ. ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಒಟ್ಟು ಹುದ್ದೆಗಳ ಪೈಕಿ 5,817 ಪದವೀಧರ ಹುದ್ದೆಗಳು ಮತ್ತು 3,058 ಅಂಡರ್ ಗ್ರಾಜುಯೇಟ್ ಹುದ್ದೆಗಳು ಖಾಲಿ ಇವೆ.
ಪದವೀಧರ (Graduate NTPC) ಎನ್‌ಟಿಪಿಸಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ
ಸ್ಟೇಷನ್ ಮಾಸ್ಟರ್ – 615
ಗೂಡ್ಸ್ ಟ್ರೈನ್ ಮ್ಯಾನೇಜರ್ – 342
ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್‌ವೈಸರ್ – 161
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ – 921
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 638
ಅಂಡರ್ ಗ್ರಾಜುಯೇಟ್ (Non-Graduate NTPC) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ
ಟ್ರೈನಿ ಕ್ಲರ್ಕ್ – 77
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ – 2,424
ಅಕೌಂಟ್ ಕ್ಲರ್ಕ್ ಕಮ್ ಟೈಪಿಸ್ಟ್ – 394
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 163
10ನೇ ತರಗತಿ ಪಾಸಾದವರಿಗೆ DCC ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ
ವಿದ್ಯಾರ್ಹತೆ
ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪದವೀಧರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು. ರೈಲ್ವೆ ನೇಮಕಾತಿ ಮಂಡಳಿ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಂಡರ್ ಗ್ರಾಜುಯೇಟ್ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ತೇರ್ಗಡೆಯಾಗಿರಬೇಕು.
ಆಯ್ಕೆ ಪ್ರಕ್ರಿಯೆ
ಸಿಬಿಟಿ–1 ಮತ್ತು ಸಿಬಿಟಿ–2 ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಟೈಪಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟೈಪಿಂಗ್ ಸ್ಕಿಲ್ ಟೆಸ್ಟ್ (TST) ಮೂಲಕ ಆಯ್ಕೆ ಮಾಡಲಾಗುತ್ತದೆ. ಇದರೊಂದಿಗೆ ಪ್ರಮಾಣಪತ್ರಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಕೂಡ ಇರಲಿದೆ.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18–30 ವರ್ಷ ವಯೋಮಿತಿ ನಿಗದಿಪಡಿಸಲಿದ್ದು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10–15 ವರ್ಷ ವಯೋಮಿತಿ ಸಡಿಲಿಕೆಯನ್ನ ನೀಡಿದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೆ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ, ಇಬಿಸಿ ಅಭ್ಯರ್ಥಿಗಳಿಗೆ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ 250 ರೂ. ಹಾಗೂ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಇರಲಿದೆ.
ಅಭ್ಯರ್ಥಿಗಳು ಹುದ್ದೆ ಕುರಿತಾದ ಹೆಚ್ಚಿನ ವಿವರಗಳು, ಅರ್ಜಿ ಲಿಂಕ್ ಮತ್ತು ಪರಿಷ್ಕೃತ ಅಧಿಸೂಚನೆಗಾಗಿ rrbapply.gov.inವೆಬ್‌ಸೈಟ್‌ಗೆ ಭೇಟಿ ನೀಡಬಹುದು.