ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RRB Recruitment 2025: ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ಗುಡ್‌ನ್ಯೂಸ್‌; ರೈಲ್ವೆಯಲ್ಲಿದೆ ಬರೋಬ್ಬರಿ 9,970 ಹುದ್ದೆ

ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಬರೋಬ್ಬರಿ 9,970 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಲೋಕೋ ಪೈಲಟ್ ಹುದ್ದೆ ಇದಾಗಿದ್ದು, ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ರೈಲ್ವೆಯ ವಿವಿಧ ವಲಯಗಳಲ್ಲಿ ಹುದ್ದೆ ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಮೇ 11.

ರೈಲ್ವೆಯಲ್ಲಿದೆ ಬರೋಬ್ಬರಿ 9,970 ಹುದ್ದೆ; ಹೀಗೆ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ.

Profile Ramesh B Apr 12, 2025 10:12 PM

ಹೊಸದಿಲ್ಲಿ: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಶುಭಸುದ್ದಿ. ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಖಾಲಿ ಇರುವ ಬರೋಬ್ಬರಿ 9,970 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಲೋಕೋ ಪೈಲಟ್ (Assistant Loco Pilots) ಹುದ್ದೆ ಇದಾಗಿದ್ದು, ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು (RRB Recruitment 2025). ರೈಲ್ವೆಯ ವಿವಿಧ ವಲಯಗಳಲ್ಲಿ ಹುದ್ದೆ ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Guide). ಕೊನೆಯ ದಿನ ಮೇ 11.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೇಂದ್ರ ರೈಲ್ವೆ - 376

ಪೂರ್ವ ಮಧ್ಯ ರೈಲ್ವೆ - 700

ಪೂರ್ವ ಕರಾವಳಿ ರೈಲ್ವೆ - 1,461

ಪೂರ್ವ ರೈಲ್ವೆ - 768

ಉತ್ತರ ಮಧ್ಯ ರೈಲ್ವೆ - 508

ಈಶಾನ್ಯ ರೈಲ್ವೆ - 100

ಈಶಾನ್ಯ ಗಡಿನಾಡಿನ ರೈಲ್ವೆ - 125

ಉತ್ತರ ರೈಲ್ವೆ - 521

ವಾಯುವ್ಯ ರೈಲ್ವೆ - 679

ದಕ್ಷಿಣ ಮಧ್ಯ ರೈಲ್ವೆ - 989

ಆಗ್ನೇಯ ಮಧ್ಯ ರೈಲ್ವೆ - 568

ಆಗ್ನೇಯ ರೈಲ್ವೆ - 796

ದಕ್ಷಿಣ ರೈಲ್ವೆ - 510

ಪಶ್ಚಿಮ ಮಧ್ಯ ರೈಲ್ವೆ - 759

ಪಶ್ಚಿಮ ರೈಲ್ವೆ - 885

ಮೆಟ್ರೋ ರೈಲು ಕೋಲ್ಕತಾ - 225 ಹುದ್ದೆಗಳಿವೆ.

10ನೇ ತರಗತಿ, ಡಿಪ್ಲೊಮಾ, ಐಟಿಐ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕರಿಗೆ 6-8 ವರ್ಷಗಳ ರಿಯಾಯಿತಿ ಇದೆ.

ಈ ಸುದ್ದಿಯನ್ನೂ ಓದಿ: ESIC Recruitment 2025: ಎಂಪ್ಲಾಯ್ಸ್‌ ಸ್ಟೇಟ್‌ ಇನ್ಶೂರೆನ್ಸ್‌ ಕಾರ್ಪೋರೇಷನ್‌ನಲ್ಲಿದೆ 558 ಹುದ್ದೆ; ಹೀಗೆ ಅಪ್ಲೈ ಮಾಡಿ

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕರು, ಮಹಿಳಾ/ತೃತೀಯ ಲಿಂಗಿಗಳು 250 ರೂ. ಸಲ್ಲಿಸಬೇಕು. ಕಂಪ್ಯೂಟರ್‌ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

RRB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಮಾಹಿತಿಗಳು

ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನ್ಮ ದಿನಾಂಕ ದಾಖಲೆ, ಐಟಿಐ ಶಿಕ್ಷಣ ದಾಖಲೆ, ಜಾತಿ ಪ್ರಮಾಣಪತ್ರ, ಇಮೇಲ್ ವಿಳಾಸ, ಮೊಬೈಲ್ ನಂಬರ್, ಸಹಿ ಸ್ಕ್ಯಾನ್‌ ಕಾಪಿ, ಪಾಸ್‌ಪೋರ್ಟ್‌ ಅಳತೆ ಭಾವಚಿತ್ರ ಸ್ಕ್ಯಾನ್‌ ಕಾಪಿ, ಬೇಸಿಕ್‌ ಹಾಗೂ ವೈಯಕ್ತಿಕ ಸವಿವರಗಳು.

ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://www.rrbapply.gov.in/#/auth/landing)

* 'Apply' ಎಂದಿರುವಲ್ಲಿ ಕ್ಲಿಕ್ ಮಾಡಿ. 2 ಆಯ್ಕೆಗಳು ಪ್ರದರ್ಶಿತವಾಗುತ್ತವೆ.

* 'Create An Account' ಆಯ್ಕೆ ಮಾಡಿ ಕ್ಲಿಕ್ ಮಾಡಿ.

* ಹೆಸರು ರಿಜಿಸ್ಟರ್ ಮಾಡಿಕೊಳ್ಳಿ.

* ಲಾಗಿನ್‌ ಆಗಿ.

* ಈಗ ಕಂಡುಬರುವ ಅರ್ಜಿ ಭರ್ತಿ ಮಾಡಿ.

* ಅರ್ಜಿ ಶುಲ್ಕ ಭರ್ತಿ ಮಾಡಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0172-565-3333 ಮತ್ತು 9592001188ಕ್ಕೆ ಕರೆ ಮಾಡಿ.