ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RRB Recruitment 2026: ಬರೋಬ್ಬರಿ 11,127 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ; ಐಟಿಐ ಪಾಸಾದವರು ಅಪ್ಲೈ ಮಾಡಬಹುದು

Latest Railway Jobs: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 11,127 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ . ಅಸಿಸ್ಟಂಟ್‌ ಲೋಕೊ ಪೈಲಟ್‌ ಹುದ್ದೆ ಇದಾಗಿದ್ದು, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 14.

ಸಾಂದರ್ಭಿಕ ಚಿತ್ರ

ದೆಹಲಿ, ಮೇ 19: ರೈಲ್ವೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌ (Job Guide). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 11,127 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಅರ್ಜಿ ಆಹ್ವಾನಿಸಿದೆ (Latest Railway Jobs). ಅಸಿಸ್ಟಂಟ್‌ ಲೋಕೊ ಪೈಲಟ್‌ ಹುದ್ದೆ ಇದಾಗಿದ್ದು, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು (RRB Recruitment 2026). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 14.

ಹುದ್ದೆಯ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೊ ಪೈಲಟ್‌ ಹುದ್ದೆ ಇದಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 200 ಉದ್ಯೋಗಿಗಳ ನೇಮಕಾತಿ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಜತೆ ಎನ್‌ಸಿವಿಟಿ / ಎಸ್‌ಎಸ್‌ವಿಟಿಯ ಮಾನ್ಯತೆ ಪಡೆದ ಸಂಸ್ಥೆಗಳಿಂದ ಫಿಟ್ಟರ್, ಎಲೆಕ್ಟ್ರಿಷಿಯನ್, ಇನ್ಸ್ಟ್ರುಮೆಂಟ್‌, ಮೆಕ್ಯಾನಿಕ್, ಮಿಲ್‌ರೈಟ್ / ಮೈನ್‌ಟನೆನ್ಸ್‌ ಮೆಕ್ಯಾನಿಕ್, ಮೆಕ್ಯಾನಿಕ್ (ರೇಡಿಯೋ ಮತ್ತು ಟಿವಿ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ಮೋಟಾರ್‌ ವಾಹನ), ವೈರ್‌ಮ್ಯಾನ್, ಟ್ರ್ಯಾಕ್ಟರ್ ಮೆಕ್ಯಾನಿಕ್, ಆರ್ಮೇಚರ್ ಮತ್ತು ಕಾಯಿಲ್ ವೈಂಡರ್, ಮೆಕ್ಯಾನಿಕ್ (ಡೀಸೆಲ್), ಹೀಟ್ ಎಂಜಿನ್, ಟರ್ನರ್, ಮೆಷಿನಿಸ್ಟ್, ರೆಫ್ರಿಜರೇಷನ್ ಮತ್ತು ಏರ್-ಕಂಡಿಷನಿಂಗ್ ಮೆಕ್ಯಾನಿಕ್ ಐಟಿಐ ಪಾಸಾದವರು ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಮಾಜಿ ಯೋಧರು/ಪಿಡಬ್ಲ್ಯುಬಿಡಿ/ಮಹಿಳಾ/ತೃತೀಯ ಲಿಂಗಿಗಳು/ಅಲ್ಪ ಸಂಖ್ಯಾತ ಅಭ್ಯರ್ಥಿಗಳು 250 ರುಪಾಯಿ ಮತ್ತು ಇತರ ಎಲ್ಲ ಅಭ್ಯರ್ಥಿಗಳು 500 ರುಪಾಯಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಭಾರತೀಯ ವೃತ್ತಿಪರರು ಉದ್ಯೋಗ ವಂಚನೆಗಳ ಬಗ್ಗೆ ಜಾಗರೂಕರು, ಆದರೆ ಅಪಾಯ ಇನ್ನೂ ಇದೆ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌, ಪಿಇಟಿ/ವೈದ್ಯಕೀಯ ಪರೀಕ್ಷೆ/ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರುಪಾಯಿ ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

RRB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://www.rrbapply.gov.in/#/auth/home)
  • 'Create An Account' ಆಯ್ಕೆ ಮಾಡಿ ಕ್ಲಿಕ್ ಮಾಡಿ.
  • ಹೆಸರು ರಿಜಿಸ್ಟರ್ ಮಾಡಿಕೊಳ್ಳಿ.
  • ಲಾಗಿನ್‌ ಆಗಿ.
  • ಈಗ ಕಂಡುಬರುವ ಅರ್ಜಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅರ್ಜಿ ಶುಲ್ಕ ಭರ್ತಿ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಗೆ ಭೇಟಿ ನೀಡಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author