ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RRB Recruitment 2026: 1,215 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ; ಪದವೀಧರರು ಅಪ್ಲೈ ಮಾಡಿ

Latest Railway Jobs: ಖಾಲಿ ಇರುವ ಬರೋಬ್ಬರಿ 1,215 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. ಸ್ಟೇಷನ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ನವೆಂಬರ್‌ 25.

ಸಾಂದರ್ಭಿಕ ಚಿತ್ರ

ದೆಹಲಿ, ನ. 2: ಕೇಂದ್ರ ಸರ್ಕಾರದ ಉದ್ಯೋಗ ಪಡೆದುಕೊಳ್ಳಬೇಕು ಎಂದುಕೊಳ್ಳುವವರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ. ಖಾಲಿ ಇರುವ ಬರೋಬ್ಬರಿ 1,215 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಅರ್ಜಿ ಆಹ್ವಾನಿಸಿದೆ (Latest Railway Jobs). ಸ್ಟೇಷನ್‌ ಮಾಸ್ಟರ್‌ (Station Master) ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಬಹುದು (RRB Recruitment 2026). ಬೆಂಗಳೂರು ವಲಯದಲ್ಲಿ 102 ಹುದ್ದೆಗಳಿವೆ (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್‌ 25.

ವಿದ್ಯಾರ್ಹತೆ ಮತ್ತು ವಯೋಮಿತಿ

ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ, ಎಸ್‌ಟಿ, ಇಬಿಸಿ ಅಭ್ಯರ್ಥಿಗಳು, ಮಾಜಿ ಯೋಧರು, ಅಲ್ಪ ಸಂಖ್ಯಾತರು, ಮಹಿಳೆಯರು ಮತ್ತು ತೃತೀಯ ಲಿಂಗಿಗಳು 250 ರೂಪಾಯಿ ಮತ್ತು ಉಳಿದೆಲ್ಲ ಅಭ್ಯರ್ಥಿಗಳು 500 ರೂಪಾಯಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಭರ್ಜರಿ ನೇಮಕಾತಿಗೆ KEA ಅಧಿಸೂಚನೆ; 5,431 ಎಸ್‌ಡಿಎ, ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಮೊದಲ ಮತ್ತು 2ನೇ ಹಂತದ ಸಿಬಿಟಿ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 ರುಪಾಯಿ ಮಾಸಿಕ ವೇತನ ದೊರೆಯಲಿದೆ. ಮೊದಲ ಹಂತದ ಸಿಬಿಟಿಯಲ್ಲಿ 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ 1 ಅಂಕಗಳಿವೆ. ಬೇಸಿಕ್‌ ಸೈನ್ಸ್‌, ಗಣಿತ ಮತ್ತು ಅನಾಲಿಟಿಕಲ್‌ ಮತ್ತು ಅನಾಲಿಟಿಕಲ್‌ ಕ್ಯಾಪಾಬಿಲಿಟಿ 60, ಲಾಜಿಕಲ್‌ ಕ್ಯಾಪಾಬಿಲಿಟಿ 20, ಮೆಂಟಲ್‌ ರೀಸನಿಂಗ್‌ 20 ಪ್ರಶ್ನೆಗಳಿರುತ್ತವೆ. ಪರೀಕ್ಷೆಯ ಅವಧಿ: 120 ನಿಮಿಷ. 2ನೇ ಹಂತದಲ್ಲಿ ಕಂಪ್ಯೂಟರ್‌ ಬೇಸ್ಡ್‌ ಆಪ್ಟಿಟ್ಯೂಡ್‌ ಟೆಸ್ಟ್‌ ಇರಲಿದೆ. ಗಮನಿಸಿ ಪ್ರತಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿವೆ. ಹೀಗಾಗಿ ಸರಿಯಾಗಿ ಯೋಚಿಸಿ ಉತ್ತರಿಸಿ.

RRB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://www.rrbapply.gov.in/#/auth/home)
  • 'Create An Account' ಆಯ್ಕೆ ಮಾಡಿ ಕ್ಲಿಕ್ ಮಾಡಿ.
  • ಹೆಸರು ರಿಜಿಸ್ಟರ್ ಮಾಡಿಕೊಳ್ಳಿ. ಲಾಗಿನ್‌ ಆಗಿ.
  • ಈಗ ಕಂಡುಬರುವ ಅರ್ಜಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅರ್ಜಿ ಶುಲ್ಕ ಭರ್ತಿ ಪಾವತಿಸಿ. ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author