ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RRB Recruitment 2026: ಪದವೀಧರರಿಗೆ ಭರ್ಜರಿ ಗುಡ್‌ನ್ಯೂಸ್‌; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ

Latest Railway Jobs: ಖಾಲಿ ಇರುವ ಬರೋಬ್ಬರಿ 3,548 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. ಆರ್‌ಆರ್‌ಬಿ ಬೆಂಗಳೂರು ವಲಯದಲ್ಲಿ 346 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್‌ 6.

ಚಾಟ್‌ಜಿಪಿಟಿ ರಚಿತ ಚಿತ್ರ

ದೆಹಲಿ, ಅ. 8: ಕೇಂದ್ರ ಸರ್ಕಾರದ ಉದ್ಯೋಗ ಪಡೆದುಕೊಳ್ಳಬೇಕು ಎಂದು ಕನಸು ಕಾಣುವ ಪದವೀಧರರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಖಾಲಿ ಇರುವ ಬರೋಬ್ಬರಿ 3,548 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಅರ್ಜಿ ಆಹ್ವಾನಿಸಿದೆ (Latest Railway Jobs). ಚೀಫ್‌ ಕಮರ್ಷಿಯಲ್‌ ಕಮ್‌ ಟಿಕೆಟ್‌ ಸೂಪರ್‌ವೈಸರ್‌, ಗೂಡ್ಸ್‌ ಟ್ರೈನ್‌ ಮ್ಯಾನೇಜರ್‌, ಜೂನಿಯರ್‌ ಅಕೌಂಟ್ಸ್‌ ಅಸಿಸ್ಟಂಟ್‌ ಕಮ್‌ ಟೈಪಿಸ್ಟ್‌, ಸೀನಿಯರ್‌ ಕ್ಲರ್ಕ್‌ ಕಂ ಟೈಪಿಸ್ಟ್‌ ಹುದ್ದೆಗಳಿವೆ (RRB Recruitment 2026). ಆರ್‌ಆರ್‌ಬಿ ಬೆಂಗಳೂರು ವಲಯದಲ್ಲಿ 346 ಹುದ್ದೆಗಳಿವೆ (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್‌ 6.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚೀಫ್‌ ಕಮರ್ಷಿಯಲ್‌ ಕಮ್‌ ಟಿಕೆಟ್‌ ಸೂಪರ್‌ಪೈಸರ್‌-127, ಗೂಡ್ಸ್‌ ಟ್ರೈನ್‌ ಮ್ಯಾನೇಜರ್‌-2,750, ಜೂನಿಯರ್‌ ಅಕೌಂಟ್ಸ್‌ ಅಸಿಸ್ಟಂಟ್‌ ಕಮ್‌ ಟೈಪಿಸ್ಟ್‌-300, ಸೀನಿಯರ್‌ ಕ್ಲರ್ಕ್‌ ಕಮ್‌ ಟೈಪಿಸ್ಟ್‌-371 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರೈಸಿದವರು ಅಥವಾ ತತ್ಸಮಾನ ವಿದ್ಯಾರ್ಹತೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಮಾಜಿ ಯೋಧರಿಗೆ 3ರಿಂದ 8 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ, ಎಸ್‌ಟಿ, ಇಬಿಸಿ ಅಭ್ಯರ್ಥಿಗಳು, ಮಾಜಿ ಯೋಧರು, ಮಹಿಳೆಯರು ಮತ್ತು ತೃತೀಯ ಲಿಂಗಿಗಳು 250 ರುಪಾಯಿ ಮತ್ತು ಉಳಿದೆಲ್ಲ ಅಭ್ಯರ್ಥಿಗಳು 500 ರುಪಾಯಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

KEA VAO Answer Key 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ ಕೀ ಉತ್ತರಗಳು ಪ್ರಕಟ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಮೊದಲ ಮತ್ತು 2ನೇ ಹಂತದ ಸಿಬಿಟಿ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲ ಹಂತದ ಸಿಬಿಟಿಯಲ್ಲಿ 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ 1 ಅಂಕಗಳಿವೆ. ಜನರಲ್‌ ಅವರ್ನೆಸ್‌-40, ಗಣಿತ-30, ಜನರಲ್‌ ಇಂಟಲಿಜೆನ್ಸ್‌ & ರೀಸನಿಂಗ್‌-30 ಪ್ರಶ್ನೆಗಳಿವೆ. ಪರೀಕ್ಷೆಯ ಅವಧಿ: 90 ನಿಮಿಷ. ದ್ವಿತೀಯ ಹಂತದ ಸಿಬಿಟಿಯಲ್ಲಿ 120 ಅಂಕಳಿವೆ. ಒಟ್ಟು 90 ನಿಮಿಷಗಳ ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ. ಜನರಲ್‌ ಅವರ್ನೆಸ್‌-50, ಗಣಿತ-35, ಜನರಲ್‌ ಇಂಟಲಿಜೆನ್ಸ್‌ & ರೀಸನಿಂಗ್‌-35 ಪ್ರಶ್ನೆಗಳು ಸೇರಿ ಒಟ್ಟು 120 ಪ್ರಶ್ನೆಗಳಿರುತ್ತವೆ. ಗಮನಿಸಿ ಎರಡೂ ಹಂತಗಳಲ್ಲಿ ಪ್ರತಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿವೆ. ಹೀಗಾಗಿ ಸರಿಯಾಗಿ ಯೋಚಿಸಿ ಉತ್ತರಿಸಿ.

RRB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.
(
https://www.rrbapply.gov.in/assets/forms/CEN_06_2026_NTPC_G.pdf)

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://www.rrbapply.gov.in/#/auth/home)
  • 'Create An Account' ಆಯ್ಕೆ ಮಾಡಿ ಕ್ಲಿಕ್ ಮಾಡಿ.
  • ಹೆಸರು ರಿಜಿಸ್ಟರ್ ಮಾಡಿಕೊಳ್ಳಿ. ಲಾಗಿನ್‌ ಆಗಿ.
  • ಈಗ ಕಂಡುಬರುವ ಅರ್ಜಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅರ್ಜಿ ಶುಲ್ಕ ಭರ್ತಿ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author