Rubber Board Recruitment 2025: ರಬ್ಬರ್ ಬೋರ್ಡ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ
ಕೇರಳದ ಕೋಟಯಂನಲ್ಲಿ ಕೇಂದ್ರ ಕಚೇರಿ ಹೊಂದಿದರುವ ಕೇಂದ್ರ ಸರ್ಕಾರ ಅಧೀನದಲ್ಲಿರುವ ರಬ್ಬರ್ ಬೋರ್ಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಹುದ್ದೆಗಳಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾ. 10.
![ರಬ್ಬರ್ ಬೋರ್ಡ್‌ನ ಖಾಲಿ ಹುದ್ದೆಗಳಿಗೆ ಹೀಗೆ ಅರ್ಜಿ ಸಲ್ಲಿಸಿ](https://cdn-vishwavani-prod.hindverse.com/media/original_images/Rubber_Board_Recruitment_2025.jpg)
ಸಾಂದರ್ಭಿಕ ಚಿತ್ರ.
![Profile](https://vishwavani.news/static/img/user.png)
ಬೆಂಗಳೂರು: ಕೇಂದ್ರ ಸರ್ಕಾರ ಅಧೀನದಲ್ಲಿರುವ ರಬ್ಬರ್ ಬೋರ್ಡ್ (Rubber Board) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ರಬ್ಬರ್ ಬೋರ್ಡ್‌ನ ಕೇಂದ್ರ ಕಚೇರಿ ಕೇರಳದ ಕೋಟಯಂನಲ್ಲಿದೆ. ದೇಶದ ರಬ್ಬರ್ ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದು, ಸಂಶೋಧನೆ ನಡೆಸುವುದು ರಬ್ಬರ್ ಬೋರ್ಡನ ಮುಖ್ಯ ಉದ್ದೇಶ. ಪ್ರಸ್ತುತ ಒಟ್ಟು 40 ಹುದ್ದೆಗಳಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Rubber Board Recruitment 2025). ಭಾರತದ ಯಾವುದೇ ಭಾಗದಲ್ಲಿ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾ. 10 (Job Guide).
ಹುದ್ದೆಯ ವಿವರ ಮತ್ತು ವಿದ್ಯಾರ್ಹತೆ
ಫೀಲ್ಡ್ ಆಫೀಸರ್ ಹುದ್ದೆ ಇದಾಗಿದ್ದು, ಭಾರತದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಕೃಷಿಯಲ್ಲಿ ಪದವಿ ಅಥವಾ ಬಾಟನಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,000 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಇತರ ಯಾವುದೇ ಮಾದರಿಯಲ್ಲಿ ಸಲ್ಲಿಸುವ ಅರ್ಜಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ ಎಂದು ರಬ್ಬರ್ ಬೋರ್ಡ್ ಅಧಿಸೂಚನೆಯಲ್ಲಿ ತಿಳಿಸಿದೆ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ಆಯ್ಕೆಯಾದವರಿಗೆ 9,300 ರೂ. - 34,800 ರೂ. ಮಾಸಿಕ ವೇತನ ದೊರೆಯಲಿದೆ.
Rubber Board Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: India Post Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್; ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://recruitments.rubberboard.org.in/login.php).
* ಇಮೇಲ್ ಐಡಿ ನಮೂದಿಸಿ. Click for New Registration ಆಯ್ಕೆಯನ್ನು ಕ್ಲಿಕ್ ಮಾಡಿ ಹೆಸರು ನೋಂದಾಯಿಸಿ.
* ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ರಬ್ಬರ್ ಬೋರ್ಡ್‌ನ ಅಧಿಕೃತ ವೆಬ್‌ಸೈಟ್ ವಿಳಾಸ rubberboard.gov.inಗೆ ಭೇಟಿ ನೀಡಿ.