ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SBI Recruitment 2025: ಪದವಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್‌; ಎಸ್‌ಬಿಐಯಲ್ಲಿದೆ ಬರೋಬ್ಬರಿ 2,964 ಹುದ್ದೆ

Bank Jobs: ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,964 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 289 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮೇ 29.

ಎಸ್‌ಬಿಐಯಲ್ಲಿದೆ ಬರೋಬ್ಬರಿ 2,964 ಹುದ್ದೆ

ಸಾಂದರ್ಭಿಕ ಚಿತ್ರ.

Profile Ramesh B May 18, 2025 3:52 PM

ಬೆಂಗಳೂರು: ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ ಎಸ್‌ಬಿಐ (State Bank of India) ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,964 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SBI Recruitment 2025). ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ (Circle Based Officers) ಹುದ್ದೆ ಇದಾಗಿದೆ (Bank Jobs). ಕರ್ನಾಟಕದಲ್ಲಿ 289 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮೇ 29.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ (Circle Based Officers) ಹುದ್ದೆ ಇದಾಗಿದ್ದು, ರೆಗ್ಯುಲರ್‌ 2,600 ಮತ್ತು ಬ್ಯಾಕ್‌ಲಾಗ್‌ 364 ಹುದ್ದೆಗಳಿದೆ. ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಬಹುದು. ವೈದ್ಯಕೀಯ, ಎಂಜಿನಿಯರಿಂಗ್‌, ಸಿಎ, ಕಾಸ್ಟ್‌ ಅಕೌಂಟೆಂಟ್‌ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು. ಗಮನಿಸಿ, ನಿರ್ದಿಷ್ಟ ಸರ್ಕಲ್‌ನ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದಿರಬೇಕು. ಅಂದರೆ ಸ್ಥಳೀಯ ಭಾಷೆ ಓದುವುದು, ಬರೆಯುವುದು ಮತ್ತು ಮಾತನಾಡಲು ಬರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಈ ಸುದ್ದಿಯನ್ನೂ ಓದಿ: BOB Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್‌ ಚಾನ್ಸ್‌; ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ ಬರೋಬ್ಬರಿ 500 ಹುದ್ದೆ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಸ್ಕ್ರೀನಿಂಗ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.

SBI Recruitment 2025 ಅಧಿಸೂಚನೆ ಓಸಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://ibpsonline.ibps.in/sbicboapr25/)
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ.
  • ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೂಟ್‌ ವಿಳಾಸ: sbi.co.inಕ್ಕೆ ಭೇಟಿ ನೀಡಿ.