ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SAI Recruitment 2025: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿದೆ ಉದ್ಯೋಗಾವಕಾಶ; ಹೀಗೆ ಅಪ್ಲೈ ಮಾಡಿ

Job Alert: ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆ ಮೂಲಕ ಖಾಲಿ ಇರುವ ಹುದ್ದೆಗಳನ್ನುಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿದೆ  ಉದ್ಯೋಗಾವಕಾಶ

ಭಾರತೀಯ ಕ್ರೀಡಾ ಪ್ರಾಧಿಕಾರ -

Profile
Sushmitha Jain Dec 15, 2025 6:31 PM

ಬೆಂಗಳೂರು, ಡಿ. 15: ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India) ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳನ್ನು(Job Alert) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ sportsauthorityofindia.nic.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಒಟ್ಟು 11 ಮುಖ್ಯ ತರಬೇತುದಾರರ ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. 2026ರ ಜನವರಿ 11ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. ಅಭ್ಯರ್ಥಿಗಳು ಆನ್​​​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಸ್ವಾಯತ್ತ ಅಥವಾ ಶಾಸನಬದ್ಧ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಶೈಕ್ಷಣಿಕ–ಸಂಶೋಧನಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಅಥವಾ ಪ್ರಸ್ತುತ ಕೆಲಸ ಮಾಡುತ್ತಿರುವ ಅಧಿಕಾರಿಗಳು ಅರ್ಜಿ ಸಲ್ಲಿಸಬಹುದು. ಇದರ ಹೊರತಾಗಿ ಒಲಿಂಪಿಕ್ ಅಥವಾ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತರು, ಎರಡು ಬಾರಿ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡವರು, ಹಾಗೆಯೇ ದ್ರೋಣಾಚಾರ್ಯ ಪ್ರಶಸ್ತಿ ಪಡೆದಿರುವ ಕ್ರೀಡಾಪಟುಗಳು/ಪ್ರಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಕ್ರೀಡೆಗೆ ಸಂಬಂಧಿಸಿದಂತೆ ಕನಿಷ್ಠ ಮೂರು ವರ್ಷಗಳ ತರಬೇತಿ ಅನುಭವವನ್ನು ಹೊಂದಿರಬೇಕು.

ರೈಲ್ವೆ ನೇಮಕಾತಿ ಮಂಡಳಿಯಿಂದ 8,860 ಹುದ್ದೆಗಳಿಗೆ ನೇಮಕಾತಿ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

ವಯೋಮಿತಿ

ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಸೂಚನೆ ಪ್ರಕಾರ, ಒಂದು ವರ್ಷದ ಅವಧಿಗೆ ನೇಮಕಾತಿ ನಡೆಯಲಿದ್ದು, ಕಾರ್ಯಕ್ಷಮತೆ ಮತ್ತು ಅವಶ್ಯಕತೆಯನ್ನು ಆಧರಿಸಿ ಹುದ್ದೆಯ ಅವಧಿಯನ್ನು ವಿಸ್ತರಿಸಲಾಗುತ್ತದೆ. ಇನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.

ವೇತನ

ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಸೂಚನೆ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್–12 ವೇತನ ಶ್ರೇಣಿ 78,800 ರೂ.ಯಿಂದ 2,09,200 ರೂ. ತನಕ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಹೇಗೆ?

ಅರ್ಜಿದಾರರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಕ್ಷಮ ಪ್ರಾಧಿಕಾರವು ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಂದರ್ಶನದಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಕರೆಯಲಾಗುತ್ತದೆ.

SAI ನೇಮಕಾತಿ 2025 ಅರ್ಜಿ ಸಲ್ಲಿಸುವುದು ಹೇಗೆ?

  • sportsauthorityofindia.nic.inನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ ಉದ್ಯೋಗ ವಿಭಾಗಕ್ಕೆ ಹೋಗಿ.
  • ಇಲ್ಲಿ ಮುಖ್ಯ ತರಬೇತುದಾರ ಹುದ್ದೆ ನೋಟಿಫಿಕೇಶನ್ ಕ್ಲಿಕ್ ಮಾಡಿ.
  • ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಭರ್ತಿ ಮಾಡಿದ ಅರ್ಜಿ ಸಲ್ಲಿಸಿ.

ಇನ್ನು ಅರ್ಜಿ ಸಲ್ಲಿಕೆ ವೇಳೆ ಸಕ್ರಿಯ ಇಮೇಲ್ ಐಡಿ ನೀಡುವುದು ಕಡ್ಡಾಯ. ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸುವ ವೇಳೆ 10ನೇ ತರಗತಿಯ ಅಂಕಪಟ್ಟಿ (ಜನ್ಮ ದಿನಾಂಕಕ್ಕೆ), ಆಧಾರ್ ಕಾರ್ಡ್, ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳು, ಪಾಸ್‌ಪೋರ್ಟ್ ಗಾತ್ರದ ಫೋಟೊ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಬೇಕು.