ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SSC CHSL Recruitment 2026: 2,536 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌; 12ನೇ ತರಗತಿ ಪಾಸಾದವರು ಅಪ್ಲೈ ಮಾಡಬಹುದು

Job Guide: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ 2,536 ಕ್ಲರ್ಕ್‌, ಡೇಟಾ ಆಪರೇಟರ್‌ ಹುದ್ದೆಗಳ ಭರ್ತಿಗೆ ಮುಂದಾಗಿದೆ. 12ನೇ ತರಗತಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 7.

ಚಾಟ್‌ಜಿಪಿಟಿ ರಚಿತ ಚಿತ್ರ

ದೆಹಲಿ, ಸೆ. 8: ಕೆಲವು ದಿನಗಳ ಹಿಂದೆಯಷ್ಟೇ 1,748 ಜೂನಿಯರ್‌ ಎಂಜಿನಿಯರ್‌, ಸೈಂಟಿಫಿಕ್‌ ಅಸಿಸ್ಟಂಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಇದೀಗ 2,536 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಕ್ಲರ್ಕ್‌ ಮತ್ತು ಡೇಟಾ ಆಪರೇಟರ್‌ ಹುದ್ದೆ ಇದಾಗಿದ್ದು, 12ನೇ ತರಗತಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಬಹುದು (SSC CHSL Recruitment 2026). ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 7.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC)/ಜೂನಿಯರ್‌ ಸೆಕ್ರಟರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO), ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ಎ ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ/ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಡೇಟಾ ಎಂಟ್ರಿ ಆಪರೇಟರ್‌ (DEO), ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಷಯದಲ್ಲಿ 12ನೇ ತರಗತಿಯಲ್ಲಿ ಓದಿರಬೇಕು ಮತ್ತು ಗಣಿತ ವಿಷಯ ಹೊಂದಿರಬೇಕು.

ಗ್ರಾಮೀಣ ಬ್ಯಾಂಕ್‌ಗಳಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ಮುನ್ನ ಈ ಅಂಶಗಳನ್ನು ಗಮನಿಸಿ

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ತಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಇಎಸ್‌ಎಂ/ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂಪಾಯಿ ಆನ್‌ಲೈನ್‌ ಮೂಲಕ ಪಾವತಿಸಬೇಕು. ಇನ್ನು ಮೊದಲ ಕರೆಕ್ಷನ್‌ಗೆ 200 ರೂಪಾಯಿ, ದ್ವಿತೀಯ ಕರೆಕ್ಷನ್‌ಗೆ 500 ರೂಪಾಯಿ ಫೀಸ್‌ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ

ಪರೀಕ್ಷೆ (ಪೇಪರ್‌-I, ಪೇಪರ್‌-II ಕಂಪ್ಯೂಟರ್‌ ಬೇಸ್ಡ್‌ ಪರೀಕ್ಷೆ), ದಾಖಲಾತಿ ಪರಿಶೀಲನೆ, ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರವಿದೆ.

SSC CHSL Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://ssc.gov.in/login)
  • ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ರೈಲ್ವೆ ನೇಮಕಾತಿ ಮಂಡಳಿಯಿಂದ 4,029 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹೆಚ್ಚಿನ ವಿವರಗಳಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: ssc.gov.inಗೆ ಭೇಟಿ ನೀಡಿ ಅಥವಾ ಟೋಲ್‌ ಫ್ರೀ ನಂಬರ್‌ 18003093063ಕ್ಕೆ ಕರೆ ಮಾಡಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author