SSC Recruitment 2025: 1,340 ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ನಿಂದ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ
Job Guide: ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 1,340 ಜೂನಿಯರ್ ಎಂಜಿನಿಯರ್ ಹುದ್ದೆ ಖಾಲಿ ಇದ್ದು, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜು. 21.

ಸಾಂದರ್ಭಿಕ ಚಿತ್ರ.

ಹೊಸದಿಲ್ಲಿ: ಎಂಜಿನಿಯರ್ ಉದ್ಯೋಗ (Engineer Jobs) ಹೊಂದಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್ನ್ಯೂಸ್. ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2025). ಒಟ್ಟು 1,340 ಜೂನಿಯರ್ ಎಂಜಿನಿಯರ್ ಹುದ್ದೆ ಖಾಲಿ ಇದ್ದು, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜು. 21.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಡಿಪ್ಲೊಮಾ, ಸಿವಿಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ವಿಷಯಗಳಲ್ಲಿ ಬಿಇ/ಬಿ.ಟೆಕ್ ಪೂರೈಸಿದವರು ಅರ್ಜಿ ಸಲ್ಲಿಸಲು ಅರ್ಹರು. ಈ ವಿದ್ಯಾರ್ಹತೆ ಹೊಂದಿದ ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿ/ಇಡಬ್ಲ್ಯುಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು ಆನ್ಲೈನ್ ಮೂಲಕ 100 ರೂ. ಪಾವತಿಸಬೇಕು. ಎಸ್/ಎಸ್ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಈ ಸುದ್ದಿಯನ್ನೂ ಓದಿ: RRB Recruitment 2025: 10, 12ನೇ ತರಗತಿ ಪಾಸಾದವರಿಗೆ ಗುಡ್ನ್ಯೂಸ್; ರೈಲ್ವೆ ನೇಮಕಾತಿ ಮಂಡಳಿಯಿಂದ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಟೈರ್-I ಸಿಬಿಟಿ, ಟೈರ್-II ಸಿಬಿಟಿ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 ರೂ.-1,12,400 ರೂ. ಮಾಸಿಕ ವೇತನ ದೊರೆಯಲಿದೆ. ಟೈರ್- I ಪರೀಕ್ಷೆ ಅ. 27ರಿಂದ ಅ. 31ರ ತನಕ ನಡೆಯುವ ಸಾಧ್ಯತೆ ಇದೆ. ಇನ್ನು ಟೈರ್ II ಪರೀಕ್ಷೆಯ ಸಂಭಾವ್ಯ ದಿನಾಂಕ 2026ರ ಜನವರಿ-ಫೆಬ್ರವರಿ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹಿಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಪರೀಕ್ಷಾ ಕೇಂದ್ರವಿದೆ.
SSC Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ssc.gov.in/login) - ಹೆಸರು ನೋಂದಾಯಿಸಿ.
- ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ. ಅಗತ್ಯ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ.
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ ವಿಳಾಸ: ssc.gov.inಗೆ ಭೇಟಿ ನೀಡಿ.