ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

SSC Recruitment 2025: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್‌ನ್ಯೂಸ್‌; ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನಿಂದ 2,423 ಹುದ್ದೆಗಳ ಭರ್ತಿ

Job Guide: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2,423 ಫೇಸ್‌-XIII ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂ. 23.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2025). ಫೇಸ್‌-XIII (Phase-XIII) ಹುದ್ದೆ ಇದಾಗಿದೆ. ಈ ನೇಮಕಾತಿ ಡ್ರೈವ್‌ ಮೂಲಕ ಒಟ್ಟು 2,423 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ (Job Guide). ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂ. 23.

ಹುದ್ದೆ ಮತ್ತು ವಿದ್ಯಾರ್ಹತೆ

ಕ್ಯಾಂಟೀನ್ ಅಟೆಂಡೆಂಟ್ - 36 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ಫ್ಯೂಮಿಗೇಷನ್ ಅಸಿಸ್ಟೆಂಟ್ - 3 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ

ಜೂನಿಯರ್ ಎಂಜಿನಿಯರ್ - 124 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ

ಟೆಕ್ನಿಕಲ್‌ ಸೂಪರಿಟೆಂಡೆಂಟ್‌ - 8 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ, ಪದವಿ

ಟೆಕ್ನಿಕಲ್‌ ಅಟೆಂಡೆಂಟ್ - 21 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ಸೈಂಟಿಫಿಕ್‌ ಅಸಿಸ್ಟಂಟ್‌ (ಎಲೆಕ್ಟ್ರಿಕಲ್‌) - 9 ಹುದ್ದೆ, ವಿದ್ಯಾರ್ಹತೆ: ಪದವಿ

ಸೀನಿಯರ್‌ ಸೈಂಟಿಫಿಕ್‌ ಅಸಿಸ್ಟಂಟ್‌ - 6 ಹುದ್ದೆ, ವಿದ್ಯಾರ್ಹತೆ: ಪದವಿ

ಎಂಟಿಎಸ್ (ಲೈಬ್ರರಿ ಅಟೆಂಡೆಂಟ್) - 1 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ಗರ್ಲ್ಸ್‌ ಕೇಡರ್ ಇನ್‌ಸ್ಟ್ರಕ್ಟರ್‌ - 126 ಹುದ್ದೆ, ವಿದ್ಯಾರ್ಹತೆ: ಪದವಿ

ಮ್ಯಾನೇಜರ್ & ಅಕೌಂಟೆಂಟ್ - 1 ಹುದ್ದೆ, ವಿದ್ಯಾರ್ಹತೆ: ಪದವಿ

ಅಗ್ನಿಶಾಮಕ ಸಿಬ್ಬಂದಿ - 25 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ಸಿವಿಲಿಯನ್ ಮೋಟಾರ್ ಡ್ರೈವರ್ - 31 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ಎಂಟಿಎಸ್ (ನೈರ್ಮಲ್ಯ) - 27 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ ಮುಂತಾದ ಹುದ್ದೆಗಳಿವೆ.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಈ ಸುದ್ದಿಯನ್ನೂ ಓದಿ: HPCL Recruitment 2025: ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿದೆ 411 ಹುದ್ದೆ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌, ಡಾಕ್ಯುಮೆಂಟ್‌ ವೆರಿಫಿಕೇಷನ್‌, ಕಂಪ್ಯೂಟರ್‌ ಬೇಸ್ಡ್‌ ಎಕ್ಸಾಮಿನೇಷನ್‌ (CBE), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

SSC Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://ssc.gov.in/login)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: ssc.gov.inಗೆ ಭೇಟಿ ನೀಡಿ.

Ramesh Ballamoole

View all posts by this author