ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SSC Recruitment 2025: ದ್ವಿತೀಯ ಪಿಯುಸಿ ಪಾಸಾದವರಿಗೆ ಗುಡ್‌ನ್ಯೂಸ್‌; 7,565 ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Guide: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ದೇಶಾದ್ಯಂತ ಖಾಲಿ ಇರುವ 7,565 ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯು ವಿದ್ಯಾರ್ಹತೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಕೊನೆಯ ದಿನ ಅಕ್ಟೋಬರ್‌ 21.

ಸಾಂದರ್ಭಿಕ ಚಿತ್ರ

ದೆಹಲಿ: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸಿಹಿಸುದ್ದಿ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ದೇಶಾದ್ಯಂತ ಖಾಲಿ ಇರುವ 7,565 ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2025). ದ್ವಿತೀಯ ಪಿಯು ವಿದ್ಯಾರ್ಹತೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಪ್ಲೈ ಮಾಡಬಹುದು (Job Guide). ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 21.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ ಹುದ್ದೆ ಇದಾಗಿದ್ದು, ಪುರುಷರಿಗೆ 5,069 ಮತ್ತು ಮಹಿಳೆಯರಿಗೆ 2,496 ಹುದ್ದೆ ಇದೆ. ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾದವರು ಅರ್ಜಿ ಸಲ್ಲಿಸಬಹುದು. ಎನ್‌ಸಿಸಿ ವಿದ್ಯಾರ್ಥಿಗಳಿಗೆ, ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಈ ಸುದ್ದಿಯನ್ನೂ ಓದಿ: EMRS Recruitment 2025: ಏಕಲವ್ಯ ಮಾಡೆಲ್‌ ರೆಸಿಡೆಯ್ಶಿಯಲ್‌ ಸ್ಕೂಲ್‌ನಲ್ಲಿದೆ 7,267 ಹುದ್ದೆ; ಎಸ್‌ಎಸ್‌ಎಲ್‌ಸಿ ಪಾಸಾದವರು ಅಪ್ಲೈ ಮಾಡಿ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಗಳಲ್ಲಿ ಪರೀಕ್ಷಾ ಕೇಂದ್ರವಿದೆ. 2025ರ ಡಿಸೆಂಬರ್‌ ಅಥವಾ 2026ರ ಜನವರಿಯಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರೂ. - 69,100 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

SSC Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://ssc.gov.in/login)
  • ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: nests.tribal.gov.inಗೆ ಭೇಟಿ ನೀಡಿ.