ದೆಹಲಿ, ಸೆ. 6: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್ (Job Guide). ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಖಾಲಿ ಇರುವ 1,748 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2026). ಪದವಿ, ಎಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 22.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜೂನಿಯರ್ ಎಂಜಿನಿಯರ್, ಸೈಂಟಿಫಿಕ್ ಅಸಿಸ್ಟಂಟ್ ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ, ಎಂಜಿನಿಯರಿಂಗ್ ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 32 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಗ್ರಾಮೀಣ ಬ್ಯಾಂಕ್‌ಗಳಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ಮುನ್ನ ಈ ಅಂಶಗಳನ್ನು ಗಮನಿಸಿ
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಇಎಸ್‌ಎಂ/ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂಪಾಯಿ ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಪರೀಕ್ಷೆ (ಪೇಪರ್-I, ಪೇಪರ್-II ಕಂಪ್ಯೂಟರ್ ಬೇಸ್ಡ್ ಪರೀಕ್ಷೆ), ಫಿಸಿಕಲ್ ಎಫಿಶಿಯೆನ್ಸ್ ಟೆಸ್ಟ್/ಫಿಸಿಕಲ್ & ಮೆಡಿಕಲ್ ಸ್ಟಾಂಡರ್ಡ್ಸ್ (ಬಿಆರ್‌ಒ ಹುದ್ದೆಗಳಿಗೆ ಮಾತ್ರ), ದಾಖಲಾತಿ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 ರೂಪಾಯಿ – 1,12,400 ರೂಪಾಯಿ ಮಾಸಿಕ ವೇತನ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರವಿದೆ. ಪರೀಕ್ಷೆ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
SSC Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ssc.gov.in/login) - ಹೆಸರು ನೋಂದಾಯಿಸಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ರೈಲ್ವೆ ನೇಮಕಾತಿ ಮಂಡಳಿಯಿಂದ 4,029 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹೆಚ್ಚಿನ ವಿವರಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನ ಅಧಿಕೃತ ವೆಬ್‌ಸೈಟ್ ವಿಳಾಸ: ssc.gov.inಗೆ ಭೇಟಿ ನೀಡಿ ಅಥವಾ ಟೋಲ್ ಫ್ರೀ ನಂಬರ್ 180 030 930 63ಕ್ಕೆ ಕರೆ ಮಾಡಿ.
ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.