ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

SSC Stenographer Recruitment 2026: 731 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌; ದ್ವಿತೀಯ ಪಿಯುಸಿ ಪಾಸಾವರು ಅಪ್ಲೈ ಮಾಡಿ

Staff Selection Commission: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ದೇಶಾದ್ಯಂತ ಖಾಲಿ ಇರುವ 731 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಕೊನೆಯ ದಿನ ಮೇ 15.

731 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ  ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Apr 25, 2026 4:14 PM

ದೆಹಲಿ, ಏ. 25: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸಿಹಿ ಸುದ್ದಿ (Job Guide). ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ದೇಶಾದ್ಯಂತ ಖಾಲಿ ಇರುವ 731 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Stenographer Recruitment 2026). ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 15.

ಉದ್ಯೋಗ ವಿವರ ಮತ್ತು ವಿದ್ಯಾರ್ಹತೆ

ಸ್ಟೆನೋಗ್ರಾಫರ್‌ ಸಿ, ಡಿ ಗ್ರೂಪ್‌ ಹುದ್ದೆ ಇದಾಗಿದೆ. ಆಯ್ಕೆಯಾದವರಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ದೇಶದ ಯಾವುದೇ ಶಿಕ್ಷಣ ಮಂಡಳಿ/ವಿಶ್ವ ವಿದ್ಯಾನಿಲಯದಲ್ಲಿ ದ್ವಿತೀಯ ಪಿಯು ಪೂರೈಸಿದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಕೃಷಿ ಇಲಾಖೆಯ 890 ಎಒ, ಎಎಒ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಗಳಲ್ಲಿ ಪರೀಕ್ಷಾ ಕೇಂದ್ರವಿದೆ.

SSC Stenographer Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ ಅರ್ಜಿ

  • ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login)
  • ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: ssc.gov.inಗೆ ಭೇಟಿ ನೀಡಿ.

ಇನ್ನಷ್ಟು ಉದ್ಯೋಗ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.