ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SSC Recruitment 2026: 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌; ಪದವಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22.

ಸಾಂದರ್ಭಿಕ ಚಿತ್ರ

ದೆಹಲಿ, ಜೂ. 15: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎನ್ನುವ ಕನಸು ಯಾರಿಗೆ ಇರುವುದಿಲ್ಲ ಹೇಳಿ? ಇದೀಗ ಅಂತಹ ಕನಸು ನನಸಾಗುವ ಅವಕಾಶ ಒದಗಿ ಬಂದಿದೆ (Job Guide). ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2026). ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಆಡಿಟ್‌ ಆಫೀಸರ್‌, ಅಸಿಸ್ಟಂಟ್‌ ಸೆಕ್ಷನ್‌ ಆಫೀಸರ್‌, ಅಸಿಸ್ಟಂಟ್‌/ಅಸಿಸ್ಟಂಟ್‌ ಸೆಕ್ಷನ್‌ ಆಫೀಸರ್‌, ಇನ್ಸ್‌ಪೆಕ್ಟರ್‌ ಆಫ್‌ ಇನ್‌ಕಂ ಟ್ಯಾಕ್ಸ್‌, ಸೆಂಟ್ರಲ್‌ ಎಕ್ಸೈಸ್‌, ಪ್ರಿವೆಂಟಿವ್‌ ಆಫೀಸರ್‌, ಎಕ್ಸಾಮಿನರ್‌, ಅಸಿಸ್ಟಂಟ್‌ ಎನ್‌ಫೋರ್ಸ್‌ಮೆಂಟ್‌ ಆಫೀಸರ್‌, ಸಬ್‌ ಇನ್ಸ್‌ಪೆಕ್ಟರ್‌, ಇನ್ಸ್‌ಪೆಕ್ಟರ್‌, ಎಕ್ಸಿಕ್ಯುಟಿವ್‌ ಅಸಿಸ್ಟಂಟ್‌, ರಿಸರ್ಚ್‌ ಅಸಿಸ್ಟಂಟ್‌, ಡಿವಿಷನಲ್‌ ಅಕೌಂಟೆಂಟ್‌, ಜೂನಿಯರ್‌ ಸ್ಟಾಟಿಸ್ಟಿಕಲ್‌ ಆಫೀಸರ್‌, ಸ್ಟಾಟಿಸ್ಟಿಕಲ್‌ ಇನ್‌ವೆಸ್ಟಿಗೇಟರ್‌ ಗ್ರೇಟ್‌-II, ಆಫೀಸ್‌ ಸೂಪರ್‌ಡೆಂಡೆಂಟ್‌, ಸೆಕ್ಷನ್‌ ಹೆಡ್‌, ಆಡಿಟರ್‌, ಆಕೌಂಟೆಂಟ್‌, ಅಕೌಂಟೆಂಟ್‌/ಜೂನಿಯರ್‌ ಅಕೌಂಟೆಂಟ್‌, ಪೋಸ್ಟಲ್‌ ಅಸಿಸ್ಟಂಟ್/ಸೋರ್ಟಿಂಗ್‌ ಅಸಿಸ್ಟಂಟ್, ಅಪ್ಪರ್‌ ಡಿವಿಷನ್‌ ಕ್ಲರ್ಕ್‌, ಸೀನಿಯರ್‌ ಅಡ್ಮಿನಿಷ್ಟ್ರೇಟಿವ್‌ ಅಸಿಸ್ಟಂಟ್‌, ಟ್ಯಾಕ್ಸ್‌ ಅಸಿಸ್ಟಂಟ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

945 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಮಾಜಿ ಯೋಧರು, ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

SSC Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಪರೀಕ್ಷಾ ಕೇಂದ್ರವಿದೆ.

ಬಳ್ಳಾರಿ ಡಿಸಿಸಿ ಬ್ಯಾಂಕ್‌ನಲ್ಲಿ 82 ಹುದ್ದೆಗಳ ಭರ್ತಿ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://ssc.gov.in/)
  • ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ:ssc.gov.inಗೆ ಭೇಟಿ ನೀಡಿ ಅಥವಾ ಟೋಲ್‌ ಫ್ರೀ ನಂಬರ್‌ 1800 309 3063ಕ್ಕೆ ಕರೆ ಮಾಡಿ.

ಇನ್ನಷ್ಟು ಉದ್ಯೋಗದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author