ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಿಂದ ಬರೋಬ್ಬರಿ 25,487 ಹುದ್ದೆಗಳ ಭರ್ತಿ; SSLC ಪಾಸಾದವರು ಅಪ್ಲೈ ಮಾಡಿ

Job Alert: ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 31ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.inಗೆ ಭೇಟಿ ನೀಡಬಹುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್

ಬೆಂಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಖಾಲಿ ಇರುವ 25,487 ಕಾನ್ಸ್‌ಟೇಬಲ್‌ (GD) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಇದೊಂದು ಸುವರ್ಣಾವಕಾಶ. ಆಸಕ್ತರು ಡಿಸೆಂಬರ್ 31, 2025 ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಹುದ್ದೆಯ ಕುರಿತಾದ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ

ಹುದ್ದೆಗಳ ವಿವರ: ಒಟ್ಟು ಹುದ್ದೆಗಳು 25,487 ಇದ್ದು, ಇದರಲ್ಲಿ 23,467 ಹುದ್ದೆಗಳು ಪುರುಷರಿಗೆ ಹಾಗೂ ಮಹಿಳೆಯರಿಗೆ 2020 ಹುದ್ದೆ ಮೀಸಲು.

ಹುದ್ದೆಗಳ ಮಾಹಿತಿ

ಬಿಎಸ್ಎಫ್(BSF)- 616

ಸಿಐಎಸ್ಎಫ್(CISF)- 14,595

ಸಿಆರ್ಪಿಎಫ್ (CRPF)- 5,490

ಐಟಿಬಿಪಿ(ITBP)- 1,293

ಎಆರ್- 1,706

ಎಸ್ಎಸ್ಎಫ್(SSF)- 23 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ; 194 ಹುದ್ದೆಗಳ ಭರ್ತಿಗೆ ನಡೆಯಲಿದೆ ನೇಮಕಾತಿ

ವಯೋಮಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರು /SC/ST/ESM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದರ ಹೊರತಾಗಿ ಇತರ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ

ಪಾವತಿ ವಿಧಾನ: ಆನ್‌ಲೈನ್/ಚಲನ್

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ದಕ್ಷತೆಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈಗಾಗಲೇ ಈ ಹುದ್ದೆಗೆ ಡಿಸೆಂಬರ್​ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್​ 31 ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುssc.gov.in ಇಲ್ಲಿಗೆ ಭೇಟಿ ನೀಡಿ.