ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Job Guide: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ನ 129 ಹುದ್ದೆಗಳಿಗೆ ಅಪ್ಲೈ ಮಾಡಿ

ಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಎಕ್ಸಿಕ್ಯುಟಿವ್‌ ಮತ್ತು ಎಂಜಿನಿಯರ್‌ ಸೇರಿ ಒಟ್ಟು 129 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾ. 14

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಟ್ಟ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (THDC Recruitment 2025). ಎಕ್ಸಿಕ್ಯುಟಿವ್‌ ಮತ್ತು ಎಂಜಿನಿಯರ್‌ ಸೇರಿ ಒಟ್ಟು 129 ಹುದ್ದೆಗಳಿವೆ. ಬಿ.ಎಸ್‌ಸಿ, ಬಿಇ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾ. 14 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಂಜಿನಿಯರ್ (ಸಿವಿಲ್) - 30 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿಇ/ಬಿ.ಟೆಕ್‌

ಎಂಜಿನಿಯರ್ (ಎಲೆಕ್ಟ್ರಿಕಲ್)- 25 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿಇ/ಬಿ.ಟೆಕ್‌

ಎಂಜಿನಿಯರ್ (ಮೆಕ್ಯಾನಿಕಲ್)- 20 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿಇ/ಬಿ.ಟೆಕ್‌

ಎಂಜಿನಿಯರ್ (ಜಿಯಾಲಜಿ & ಜಿಯೋ-ಟೆಕ್ನಾಲಜಿ) - 7 ಹುದ್ದೆ, ವಿದ್ಯಾರ್ಹತೆ: ಪದವಿ, ಎಂ.ಎಸ್‌ಸಿ, ಎಂಇ/ಎಂ.ಟೆಕ್‌

ಎಂಜಿನಿಯರ್ (ಪರಿಸರ)- 8 ಹುದ್ದೆ, ವಿದ್ಯಾರ್ಹತೆ: ಬಿಇ/ಬಿ.ಟೆಕ್‌, ಎಂಇ/ಎಂ.ಟೆಕ್‌

ಎಂಜಿನಿಯರ್ (ಗಣಿಗಾರಿಕೆ) - 7 ಹುದ್ದೆ, ವಿದ್ಯಾರ್ಹತೆ: ಮೈನಿಂಗ್‌ ಎಂಜಿನಿಯರಿಂಗ್‌ನಲ್ಲಿ ಪದವಿ

ಎಕ್ಸಿಕ್ಯೂಟಿವ್ (ಹ್ಯೂಮನ್ ರಿಸೋರ್ಸ್) - 15 ಹುದ್ದೆ, ವಿದ್ಯಾರ್ಹತೆ: ಎಂಬಿಎ, ಸ್ನಾತಕೋತ್ತರ ಪದವಿ/ಡಿಪ್ಲೊಮಾ, ಎಂಎಸ್‌ಡಬ್ಲ್ಯು

ಎಕ್ಸಿಕ್ಯೂಟಿವ್ (ಫೈನಾನ್ಸ್) - 15 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಂಎ

ಪವನ ವಿದ್ಯುತ್ ಯೋಜನೆಯ ಎಂಜಿನಿಯರ್ - 2 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ, ಬಿಇ/ಬಿ.ಟೆಕ್‌.

ವಯೋಮಿತಿ

ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ, ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 50,000 ರೂ. – 1,60,000 ರೂ. ಮಾಸಿಕ ವೇತನ ದೊರೆಯಲಿದೆ.

THDC Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಈ ಸುದ್ದಿಯನ್ನೂ ಓದಿ: India Post Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://test.cbexams.com/EDPSU/THDC/THDC/Registration/Regstep.aspx)

* ಹೆಸರು ನೋಂದಾಯಿಸಿ.

* ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: thdc.co.inಗೆ ಭೇಟಿ ನೀಡಿ.

Ramesh Ballamoole

View all posts by this author