ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Union Bank Recruitment 2025: ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 500 ಹುದ್ದೆ; ಹೀಗೆ ಅಪ್ಲೈ ಮಾಡಿ

Job Guide: ದೇಶದ ಪ್ರತಿಷ್ಠತ ಬ್ಯಾಂಕ್‌ಗಳಲ್ಲಿ ಒಂದಾದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆ ಖಾಲಿ ಇದ್ದು, ಪದವಿ, ಎಂ.ಟೆಕ್‌ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 20.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿದೆ 500 ಹುದ್ದೆ

ಸಾಂದರ್ಭಿಕ ಚಿತ್ರ.

Profile Ramesh B May 1, 2025 3:53 PM

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಭರ್ಜರಿ ಗುಡ್‌ನ್ಯೂಸ್‌ ಹೊರ ಬಿದ್ದಿದೆ. ದೇಶದ ಪ್ರತಿಷ್ಠತ ಬ್ಯಾಂಕ್‌ಗಳಲ್ಲಿ ಒಂದಾದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ (Union Bank of India) ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Union Bank Recruitment 2025). ಒಟ್ಟು 500 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆ (Specialist Officers Posts) ಖಾಲಿ ಇದ್ದು, ಪದವಿ, ಎಂ.ಟೆಕ್‌ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು(Job Guide). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಮ್ಯಾನೇಜರ್‌ (ಕ್ರೆಡಿಟ್‌) - 250 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಂಎ, ಸಿಎಸ್‌, ಎಂಬಿಎ, ಎಂಎಎಂಎಸ್‌, ಪಿಜಿಡಿಎಂ, ಪಿಜಿಡಿಬಿಎಂ, ಪದವಿ

ಅಸಿಸ್ಟಂಟ್‌ ಮ್ಯಾನೇಜರ್‌ (ಐಟಿ) - 250 ಹುದ್ದೆ, ವಿದ್ಯಾರ್ಹತೆ: ಬಿ.ಇ ಅತವಾ ಬಿ.ಟೆಕ್‌, ಎಂಸಿಎ, ಎಂ.ಎಸ್‌ಸಿ, ಎಂ.ಎಸ್‌, ಎಂ.ಟೆಕ್‌. ಜತೆಗೆ ಕಾರ್ಯಾನುಭವ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 117 ರೂ. ಮತ್ತು ಇತರ ಎಲ್ಲ ಅಭ್ಯರ್ಥಿಗಳು 1,180 ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ವೈಯಕ್ತಿಕ ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.

ಈ ಸುದ್ದಿಯನ್ನೂ ಓದಿ: AFMS Recruitment 2025: ಆರ್ಮಿ ಆಸ್ಪತ್ರೆಯಲ್ಲಿದೆ 400 ಮೆಡಿಕಲ್‌ ಆಫೀಸರ್‌ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ

Union Bank Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://ibpsonline.ibps.in/ubisoapr25/)

* ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: unionbankofindia.co.inಗೆ ಭೇಟಿ ನೀಡಿ.