Job Guide: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್; 140 ಹೋಮ್ ಗಾರ್ಡ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ 140 ಹೋಮ್ ಗಾರ್ಡ್ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ನಿಮ್ಮ ಅರ್ಜಿ ಮಾ. 3ರ ಒಳಗೆ ತಲುಪುವಂತಿರಬೇಕು.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್. ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ (Uttara Kannada District Home Guard) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Uttara Kannada District Home Guard Recruitment 2025). ಒಟ್ಟು 140 ಹುದ್ದೆಗಳಿದ್ದು, 10ನೇ ತರಗತಿ ಪಾಸಾದ ಪುರುಷ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು (Job Guide), ಮಾ. 3ರ ಒಳಗೆ ತಲುಪುವಂತಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಹೋಮ್ ಗಾರ್ಡ್ ಹುದ್ದೆ ಇದಾಗಿದ್ದು, ಯಾವುದೇ ಅಧಿಕೃತ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಕಂಪ್ಯೂಟರ್ ಜ್ಞಾನ ಇದ್ದವರಿಗೆ, ಹೆವಿ ಡ್ರೈವಿಂಗ್ ಲೈಸನ್ಸ್ ಹೊಂದಿದವರಿಗೆ, ಅಡುಗೆ ಭಟ್ಟರು, ಮೆಕ್ಯಾನಿಕ್, ಪೈಂಟರ್, ಪ್ಲಂಬರ್ ಮತ್ತು ಎನ್.ಸಿ.ಸಿ. ಮತ್ತು ಕ್ರೀಡೆಗಳಲ್ಲಿ ಸಾಮರ್ಥ್ಯ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ
19 ವರ್ಷಕ್ಕಿಂತ ಮೇಲ್ಪಟ್ಟ, 50 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಗೃಹ ರಕ್ಷಕ ದಳದ ಜಿಲ್ಲಾ ಕಚೇರಿ, ಸರ್ವೋದಯ ನಗರ, ಡಿವಕರ್ ಕಾಮರ್ಸ್ ಕಾಲೇಜ್ ಎದುರು, ಕೊಡಿಭಾಗ, ಕಾರವಾರ ಇಲ್ಲಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಮಾ. 3ರೊಳಗೆ ತಲುಪುವಂತೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:
Home Guard District Office, Sarvodaya Nagar, Opposite Diwekar Commerce College, Kodibag, Karwar.
ಈ ಸುದ್ದಿಯನ್ನೂ ಓದಿ: India Post Recruitment 2025: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್; ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದವರು ಅಪ್ಲೈ ಮಾಡಿ
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ ಮೆಡಿಕಲ್ ಫಿಟ್‌ನೆಸ್ ಸರ್ಟಿಫಿಕೆಟ್, ಆಧಾರ್ ಕಾರ್ಡ್, ಮಾರ್ಕ್ಸ್ ಕಾರ್ಡ್ ಅನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕೃತ ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್ ಮತ್ತು 2 ಭಾವಚಿತ್ರಗಳಲ್ಲಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08382-200137/226361 ಅಥವಾ 9480898775ಕ್ಕೆ ಕರೆ ಮಾಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.