ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KEA VAO Exam Result 2026: ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ; ರಿಸಲ್ಟ್‌ ಹೀಗೆ ಚೆಕ್‌ ಮಾಡಿ

VAO RPC Provisional Result: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಉಳಿಕೆ ಮೂಲ ವೃಂದದ 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಅ.4ರಂದು ನಡೆದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ.

ಬೆಂಗಳೂರು: ಕಂದಾಯ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು (KEA VAO Exam Provisional Result 2026) ಸೋಮವಾರ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಉಳಿಕೆ ಮೂಲ ವೃಂದದ 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಅ.4ರಂದು ನಡೆದ ಪತ್ರಿಕೆ-1 ಮತ್ತು ಪತ್ರಿಕೆ-2 ರ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಅ.6ರಂದು ಪ್ರಕಟಿಸಲಾಗಿತ್ತು. ಪ್ರಕಟಿಸಿರುವ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅ.8ರ ಬೆಳಿಗ್ಗೆ 10:30 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಅದರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅ.16ರಂದು ಪ್ರಕಟಿಸಲಾಗಿತ್ತು.

ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಸೋಮವಾರ (ಅ.19) ಪ್ರಕಟಿಸಲಾಗಿದೆ. ಪ್ರಕಟಿತ ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅ. 22.10.2026 ಬೆಳಿಗ್ಗೆ 10 ಗಂಟೆಯೊಳಗೆ (https://cetonline.karnataka.gov.in/kea/) ಸಲ್ಲಿಸಬಹುದು. ಪೂರಕ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ತಿಳಿಸಿದೆ.

ವಿಎಒ ಫಲಿತಾಂಶ ವೀಕ್ಷಿಸುವುದು ಹೇಗೆ?

  • ಕೆಇಎ ವೆಬ್‌ಸೈಟ್‌ಗೆ https://cetonline.karnataka.gov.in/kea/indexnew ಭೇಟಿ ನೀಡಿ.
  • ಮುಖಪುಟದ ನೇಮಕಾತಿ ಕೆಟಗರಿಗೆ ಪ್ರವೇಶಿಸಿ, ವಿಎಒ RPC ವೃಂದದ ಮೇಲೆ ಕ್ಲಿಕ್‌ ಮಾಡಿ
  • ತಾತ್ಕಾಲಿಕ ಫಲಿತಾಂಶದ ಲಿಂಕ್‌ ಕ್ಲಿಕ್ಕಿಸಿ, ಅರ್ಜಿ ಸಂಖ್ಯೆ, ಜನ್ಮ ದಿನಾಂಕ ನಮೂದಿಸಿದರೆ, ರಿಸಲ್ಟ್‌ ಲಭ್ಯವಾಗುತ್ತದೆ.