ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

WCD Dakshina Kannada Recruitment 2025: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಲ್ಲಿದೆ 277 ಹುದ್ದೆ; ಎಸ್‌ಎಸ್‌ಎಲ್‌ಸಿ ಪಾಸಾದವರು ಅಪ್ಲೈ ಮಾಡಿ

Job Guide: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 277 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 10.

ಅಂಗನವಾಡಿಯ 277 ಹುದ್ದೆಗಳಿಗೆ  ಅರ್ಜಿ ಆಹ್ವಾನ

ಎಐ ಚಿತ್ರ -

Ramesh B Ramesh B Sep 15, 2025 2:18 PM

ಬೆಂಗಳೂರು: ಕರ್ನಾಟಕದಲ್ಲೇ ಉತ್ತಮ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 277 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (WCD Dakshina Kannada Recruitment 2025). ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Department of Women and Child Development Karnataka) ತಿಳಿಸಿದೆ (Job Guide). ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 10.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಂಗನವಾಡಿ ವರ್ಕರ್‌ - 56 ಹುದ್ದೆ ಮತ್ತು ಅಂಗನವಾಡಿ ಹೆಲ್ಪರ್‌ - 221 ಹುದ್ದೆಗಳಿವೆ. ಅಂಗನವಾಡಿ ವರ್ಕರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಮತ್ತು ಅಂಗನವಾಡಿ ಹೆಲ್ಪರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಎಸ್‌ಇಆರ್‌ಟಿಯಿಂದ ಇಸಿಸಿಇ ಡಿಪ್ಲೊಮಾ ಕೋರ್ಸ್‌, ಜೆಒಸಿ ಕೋರ್ಸ್‌, ಎನ್‌ಟಿಟಿ ಕೋರ್ಸ್‌ ಅಥವಾ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್‌, ಹೋಮ್‌ ಸೈನ್ಸ್‌ ಪ್ರಮಾಣ ಪತ್ರ, ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಅಂಗನವಾಡಿ ವರ್ಕರ್‌ ಹುದ್ದೆಗೆ ಆದ್ಯತೆ ನೀಡಲಾಗುತ್ತದೆ.

ಈ ಸುದ್ದಿಯನ್ನೂ ಓದಿ: IBPS Recruitment 2025: ಬ್ಯಾಂಕ್‌ ಉದ್ಯೋಗಾರ್ಥಿಗಳಿಗೆ ಸಿಹಿ ಸುದ್ದಿ; ಬರೋಬ್ಬರಿ 13,217 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS

ವಯೋಮಿತಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್‌ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕ ಮತ್ತು ಮೆರಿಟ್‌ ಪಟ್ಟಿ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ವಿಳಾಸ: karnemakaone.kar.nicಗೆ ಭೇಟಿ ನೀಡಿ.
  • ಅಂಗನವಾಡಿ ವರ್ಕರ್‌/ಹೆಲ್ಪರ್‌ ಹುದ್ದೆಗಳ ಪೈಕಿ ಒಂದನ್ನು ಆಯ್ಕೆ ಮಾಡಿ.
  • ಈಗ ಕಂಡುಬರುವ ಅರ್ಜಿಯನ್ನು ಭರ್ತಿ ಮಾಡಿ.
  • ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರ್‌/ಉಪ ತಹಶೀಲ್ದಾರ್‌ ಬಳಿಯಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: karnemakaone.kar.nic.inಗೆ ಭೇಟಿ ನೀಡಿ. ದೂರವಾಣಿ ಸಂಖ್ಯೆ: 08256-295134 (ಬೆಳ್ತಂಗಡಿ), 08255-298562 (ಬಂಟ್ವಾಳ), 0824-2263199 (ಮಂಗಳೂರು ಗ್ರಾಮಾಂತರ), 0824-2959809 (ಮಂಗಳೂರು ನಗರ), 08251-298788 (ಪುತ್ತೂರು), 7795581349 (ಸುಳ್ಯ), 08255-238080 (ವಿಟ್ಲ) ಕರೆ ಮಾಡಿ.