ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

WCD Karnataka Recruitment 2025: ತುಮಕೂರು ಜಿಲ್ಲೆಯಲ್ಲಿದೆ ಬರೋಬ್ಬರಿ 946 ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ತುಮಕೂರು ಜಿಲ್ಲೆಯಾದ್ಯಂತ ಉದ್ಯೋಗಾವಕಾಶ ಇದ್ದು, ಖಾಲಿ ಇರುವ 946 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2026ರ ಜನವರಿ 9ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸರ್ಕಾರಿ ಉದ್ಯೋಗಗಳನ್ನು ಪಡೆಯಬೇಕು ಎಂದು ಇಚ್ಚಿಸುವವರಿಗೆ ಇದೊಂದು ಸುವರ್ಣಕಾಶ.

946 ಅಂಗನವಾಡಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ. -

Profile
Sushmitha Jain Dec 16, 2025 8:26 PM

ತುಮಕೂರು, ಡಿ. 16: ಜಿಲ್ಲೆಯಲ್ಲಿ ಖಾಲಿ ಇರುವ 946 ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Directorate of Women And Child Development Department) ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕಾರ್ಯಕರ್ತೆ (Anganwadi Worker) ಮತ್ತು ಅಂಗನವಾಡಿ ಸಹಾಯಕಿಯರ (Anganwadi Helper) ಹುದ್ದೆ ಇದಾಗಿದ್ದು, ಅಧಿಸೂಚನೆ ಹೊರ ಬಿದ್ದಿದೆ. ಆಸಕ್ತ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 2026ರ ಜನವರಿ 9. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಸಂಪೂರ್ನ ಮಾಹಿತಿ ಇಲ್ಲಿದೆ.

ಶೈಕ್ಷಣಿಕ ಅರ್ಹತೆ

ತುಮಕೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸಾಗಿರಬೇಕು.

ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ SSLC ಪೂರ್ಣಗೊಳಿಸಿರಬೇಕು.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿದೆ ಉದ್ಯೋಗಾವಕಾಶ

ವಯೋಮಿತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಇತರ ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನರಿಗೆ 10 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://karnemakaone.kar.nic.in/
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ದಾಖಲಿಸಿ.
  • ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ Submit ಬಟನ್ ಮೇಲೆ ಕ್ಲಿಕ್ ಮಾಡಿ.

ಆನ್‌ಲೈನ್‌ನಲ್ಲಿ ಲಗತ್ತಿಸಬೇಕಾದ ದಾಖಲೆಗಳು

ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢಿಕೃತ ದಾಖಲೆಗಳನ್ನು ಸ್ಪಷ್ಟವಾಗಿ ಕಾಣಿಸುವಂತೆ ಸ್ಕ್ಯಾನ್ ಮಾಡಬೇಕು. ಆನ್‌ಲೈನ್ ಮೂಲಕವೇ ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಆಫ್‌ಲೈನ್‌ನಲ್ಲಿ ಸಲ್ಲಿಸುವ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ. ಇನ್ನು ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂರ್ಪಕಿಸಬಹುದು.