ಮೈಸೂರು: ಮೊಳಕಾಲ್ಮೂರು ಸೀರೆ, ಇಳಕಲ್ ಸೀರೆ, ಕಸೂತಿ ಸೀರೆ, ತಮಿಳುನಾಡಿನ ಕಾಂಜಿವರಮ್ ಸೀರೆ, ಬಿಹಾರದ ತಷರ್ ಸೀರೆ, ಕಾಂತ ಸೀರೆ, ಬಲಚುರಿ ಸೀರೆ, ಬುಟಿಕ್ ಸೀರೆ, ಪಶ್ಚಿಮ ಬಂಗಾಳದ ಬೆಂಗಾಲಿ ಕಾಟನ್ ಸೀರೆ, ಉತ್ತರಪ್ರದೇಶದ ಬನಾರಸ್ ಸೀರೆ, ಚಿಕನ್ ಎಂಬ್ರಾಯ್ಡಿರಿ ಸೀರೆ, ಮಧ್ಯ ಪ್ರದೇಶದ ಚಂದೇರಿ, ಮಹೇಶ್ವರಿ ಸೀರೆಗಳು ಮೈಸೂರಿನ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ಸಿಗುತ್ತವೆ.
ಹಲವು ವಿಶೇಷತೆಗಳ ಸೀರೆಗಳು ಒಂದೇ ಸೂರಿನಡಿ ದೊರೆಯುವಂತೆ ಮಾಡುವ ಉದ್ದೇಶದಿಂದ ಮೈಸೂರಿನ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ವಿಶೇಷ ಕೈಮಗ್ಗ ಮೇಳ ಸಂಸ್ಕೃತಿ- 2021ನ್ನು ಆಯೋ ಜಿಸಲಾಗಿದೆ.
ಡಿ.18ರಿಂದ ಜ.2ರವರೆಗೆ ನಡೆಯುತ್ತಿರುವ ಈ ಮೇಳವನ್ನು ನೇಕಾರರು ಮತ್ತು ನೇಕಾರರ ಸಹಕಾರ ಸಂಘಗಳು ತಯಾರು ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಹಾಗೂ ಕೈಮಗ್ಗ ಉತ್ಪನ್ನಗಳು ನಶಿಸಿ ಹೋಗದಂತೆ ಕಾಪಾಡುವ ಸಲುವಾಗಿ ನವದೆಹಲಿಯ ಕೈಮಗ್ಗ ಜವಳಿ ಮಂತ್ರಾಲಯ ಮತ್ತು ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿಯು ಮೈಸೂ ರಿನ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ವಿಶೇಷ ಕೈಮಗ್ಗ ಮೇಳ ಸಂಸ್ಕೃತಿ- 2021 ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿ ಸಲಾಗಿದೆ.
ರೇಷ್ಮೆ ಸೀರೆ ಮಾತ್ರವಲ್ಲದೆ, ಕಾಟನ್ ಸೀರೆಗಳು, ಡ್ರೆಸ್ ಮೆಟೀರಿಯಲ್ಗಳು, ಕಸೂತಿ ವಸ್ತ್ರಗಳು, ಟವಲ್ಗಳು, ಮೇಲು ಹಾಸು ಮತ್ತು ಹೊದಿಕೆಗಳು, ನೆಲಹಾಸು ಮತ್ತು ಇತರೆ ಕೈಮಗ್ಗ ಉತ್ಪನ್ನಗಳು ಕೂಡ ಇರಲಿವೆ.